ಆಕ್ಟಿನೋಡ್ಯಾಫ್ನೆ ಬೋರ್ಡಿಲ್ಲೋನಿಯೈ Gamble - ಲಾರೇಸಿ

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 10 ಮೀ.ವರೆವಿಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ನಯವಾಗಿದ್ದು ಕಂದು ಬಣ್ಣ ಹೊಂದಿದ್ದು ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತವೆ;ಕಚ್ಚು ಮಾಡಿದ ಜಾಗ ತೆಳು ಕಿತ್ತಳೆ ಬಣ್ಣದಲ್ಲಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ದುಂಡಾಗಿರುತ್ತವೆ ಮತ್ತು ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದ ದಟ್ಟವಾದ ಮೃದುತುಪ್ಪಳದಿಂದ ಕೂಡಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು, ಪರ್ಯಾಯ ಮತ್ತು ಸುತ್ತು ಜೋಡಣಾ ಉಪತರಂಗಿತ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 0.8- 1.2 ಸೆಂ.ಮೀ. ವರೆಗಿನ ಉದ್ದ ಹೊಂದಿದ್ದು ಚಪ್ಪಟೆಯಾಗಿದ್ದು ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದ ದಟ್ಟ ಮೃದು ತುಪ್ಪಳದಿಂದ ಕೂಡಿರುತ್ತವೆ;ಪತ್ರಗಳು 11-24 x 2-6.3 ಸೆಂ.ಮೀ ಗಾತ್ರ ಹೊಂದಿದ್ದು, ಸಂಕುಚಿತವಾಗಿ ಉದ್ದವಿರುವ ಅಂಡವೃತ್ತ-ಬುಗುರಿಭರ್ಜಿಯ ಆಕಾರದಲ್ಲಿರುತ್ತವೆ. ಪತ್ರದ ತುದಿ ಸಂಕುಚಿತವಾಗಿ ಚೂಪಾಗಿರುವುದರಿಂದ ಕ್ರಮೇಣ ಚೂಪಾಗುವ ಮಾದರಿಯಲ್ಲಿದ್ದು ,ಸಂಕುಚಿತ ಬೆಣೆಯಾಕಾರದ ಬುಡ ಹೊಂದಿರುತ್ತವೆ;ಪತ್ರಗಳ ಅಂಚು ನಯವಾಗಿರುತ್ತದೆ; ಮೇಲ್ಮೈ ಕಾಗದವನ್ನೋಲುವ ಮಾದರಿಯಲ್ಲಿರುತ್ತದೆ; ಪತ್ರದ ತಳಭಾಗದ ಮಧ್ಯನಾಳ ಮತ್ತು ಇತರ ನಾಳಗಳು ದಟ್ಟವಾದ ಮೃದುತುಪ್ಪಳದಿಂದ ಕೂಡಿರುತ್ತವೆ, ಪತ್ರದ ಮೇಲ್ಭಾಗದ ಮಧ್ಯನಾಳ ಹೊರತು ಪಡಿಸಿ ಮಿಕ್ಕೆಲ್ಲಾ ಭಾಗಗಳು ರೋಮರಹಿತವಾಗಿರುತ್ತವೆ; ಮಧ್ಯನಾಳ ಮೇಲೆದ್ದಿರುತ್ತದೆ; ಎರಡನೇ ದರ್ಜೆಯ ನಾಳಗಳು 7 -14 ಜೋಡಿಗಳಿರುತ್ತವೆ ಮತ್ತು ತೀರಾ ಓರೆಯಾಗಿರುತ್ತವೆ;ಮೂರನೇ ದರ್ಜೆಯ ನಾಳಗಳು ಹೆಚ್ಚೂ ಕಡಿಮೆ ತೀರಾ ಸನಿಹವಾಗಿದ್ದು ಲಂಬರೇಖೆಗೆ ಸಮಕೋನದಲ್ಲಿದ್ದು ಎಲೆದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ/ಹೂಗಳು : ಹೂಗಳು ಏಕಲಿಂಗಿಗಳಾದ್ದು, ಪ್ರತ್ಯೇಕ ಸಸ್ಯಗಳಲ್ಲಿರುತ್ತವೆ ಮತ್ತುಕಿರಿದಾದ ವೃಂತವುಳ್ಳ ಪೀಠಛತ್ರ ಪುಷ್ಪಮಂಜರಿಯಲ್ಲಿರುತ್ತವೆ.
ಕಾಯಿ /ಬೀಜ : ಬೆರ್ರಿಗಳು ಮಾಗಿದಾಗ ಕಪ್ಪು ಬಣ್ಣದಲ್ಲಿರುತ್ತವೆ ಮತ್ತು ಬಟ್ಟಲು ಆಕಾರದ ಪುಷ್ಪಾವರಣದ ಮೇಲೆ ಆಸೀನವಾಗಿರುತ್ತವೆ; ಬೀಜಗಳ ಸಂಖ್ಯೆ 1.

ಜೀವಪರಿಸ್ಥಿತಿ :

900 ರಿಂದ 2400 ಮೀ. ನಡುವಿನ ಎತ್ತರದವರೆಗಿನ ತೇವಾಂಶವುಳ್ಳ ನಿತ್ಯಹರಿದ್ವರ್ಣ ಕಾಡುಗಳಲ್ಲಿನ ಒಳಛಾವಣಿ ಮರವಾಗಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಸಹ್ಯಾದ್ರಿ ಮತ್ತು ಪಾಲಕ್ಕಾಡು ಬೆಟ್ಟಗಳಲ್ಲಿ ಕಂಡುಬರುತ್ತದೆ.

ಗ್ರಂಥ ಸೂಚಿ :

Kew Bull. 129. 1925; Gamble, Fl.Madras 2:1231.1993 (rep.ed.);Sasidharan, Biodiversity documentation for Kerala Plants, part 6, 394.2004.

Top of the Page