ಆಕ್ಟಿನೋಡ್ಯಾಫ್ನೆ ಕಂಪಾನ್ಯುಲೇಟ J. Hk. var. - ಲಾರೇಸಿ

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 7 ಮೀ.ವರೆವಿಗೆ ಬೆಳೆಯುವ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ತೆಳು ಹಾಗೂ ದುಂಡಾಗಿರುತ್ತವೆ ಮತ್ತು ಕಂದು ಬಣ್ಣದ ದಟ್ಟವಾದ ಮೃದುತುಪ್ಪಳದಿಂದ ಕೂಡಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು, ಉಪತರಂಗಿತ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 0.6- 1 ಸೆಂ.ಮೀ. ವರೆಗಿನ ಉದ್ದ ಹೊಂದಿದ್ದು ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಕಾದಲ್ಲಿದ್ದು ರೋಮರಹಿತವಾಗಿರುತ್ತವೆ; ಪತ್ರಗಳು 3.6-10 x 1.5-3.5 ಸೆಂ.ಮೀ.ಗಾತ್ರ ಹೊಂದಿದ್ದು, ಸಂಕುಚಿತವಾದ ಅಂಡವೃತ್ತದಿಂದ ಬುಗುರಿಭರ್ಜಿಯವರೆಗಿನ ಆಕಾರದಲ್ಲಿರುತ್ತವೆ. ಪತ್ರದ ತುದಿ ಚೂಪಲ್ಲದ ಮಾದರಿಯಲ್ಲಿದ್ದು,ಬೆಣೆಯಾಕಾರದ ಬುಡ ಹೊಂದಿರುತ್ತವೆ; ಪತ್ರಗಳ ಅಂಚು ನಯವಾಗಿರುತ್ತದೆ; ಪತ್ರಗಳ ತಳಭಾಗ ಮಾಸಲು ಬೂದು ಹಸಿರು ಬಣ್ಣದಲ್ಲಿರುತ್ತದೆ; ಪತ್ರಗಳ ಮೇಲ್ಮೈ ಬಲಿತಾಗ ರೋಮರಹಿತವಾಗಿರುತ್ತದೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಮೇಲೆದ್ದಿರುತ್ತದೆ; ಎರಡನೇ ದರ್ಜೆಯ ನಾಳಗಳು 7 -8 ಜೋಡಿಗಳಿರುತ್ತವೆ ಮತ್ತು ತೀರಾ ಓರೆಯಾಗಿರುತ್ತವೆ; ಮೂರನೇ ದರ್ಜೆಯ ನಾಳಗಳು ಹೆಚ್ಚೂ ಕಡಿಮೆ ತೀರಾ ಸನಿಹವಾಗಿದ್ದು ಲಂಬರೇಖೆಗೆ ಸಮಕೋನದಲ್ಲಿದ್ದು ಎಲೆದಿಂಡಿಗೆ ಅಡ್ಡವಾಗಿ ಕೂಡುವ ರೀತಿಯಲ್ಲಿದ್ದು ಅಪ್ರಮುಖವಾಗಿರುತ್ತವೆ.
ಪುಷ್ಪಮಂಜರಿ/ಹೂಗಳು : ಹೂಗಳು ಏಕಲಿಂಗಿಗಳಾದ್ದು, ಪ್ರತ್ಯೇಕ ಸಸ್ಯಗಳಲ್ಲಿರುತ್ತವೆ ಮತ್ತು ಅಕ್ಷಾಕಂಕುಳಿನಲ್ಲಿರುವ ಗುಚ್ಛಗಳಲ್ಲಿ ಅಥವಾ ಪಾರ್ಶ್ವದಲ್ಲಿನ ಗುಚ್ಛಗಳಲ್ಲಿರುತ್ತವೆ.
ಕಾಯಿ /ಬೀಜ : ಬೆರ್ರಿಗಳು ಗೋಳಾಕಾರದಲ್ಲಿದ್ದು ಅಂದಾಜು 1 ಸೆಂ.ಮೀ.ವ್ಯಾಸ ಹೊಂದಿರುತ್ತವೆ; ಬೀಜಗಳ ಸಂಖ್ಯೆ 1.

ಜೀವಪರಿಸ್ಥಿತಿ :

1000 ಮತ್ತು1800 ಮೀ. ನಡುವಿನ ಎತ್ತರದವರೆಗಿನ ನಿತ್ಯಹರಿದ್ವರ್ಣ ಕಾಡುಗಳಲ್ಲಿನ ಒಳಛಾವಣಿ ಮರವಾಗಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ಅಗಸ್ತ್ಯಮಲೆ, ದಕ್ಷಿಣ ವರುಶುನಾಡು ಮತ್ತು ಪಾಲಕ್ಕಾಡು ಪ್ರದೇಶಗಳ ಬೆಟ್ಟಪ್ರದೇಶಗಳಲ್ಲಿ ಕಂಡುಬರುತ್ತದೆ.

ಸ್ಥಿತಿ :

ದುರ್ಬಲ ಸ್ಥಿತಿ (IUCN 2000).

ಗ್ರಂಥ ಸೂಚಿ :

Fl. Brit. Ind. 5: 148. 1886; Gamble, Fl. Madras 2: 1230. 1993 (re. ed); Sasidharan, Biodiversity documentation for Kerala- Flowering Plants, part 6: 394. 2004.

Top of the Page