English   Kannada   Malayalam   Tamil   
ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ
ಪ್ರಕೃತಿ : | 5 ಮೀ. ಎತ್ತರದವರೆವಿಗೆ ಬೆಳೆಯುವ ಸಣ್ಣ ಮರಗಳು. |
ಕವಲುಗಳು ಮತ್ತು ಕಿರುಕೊಂಬೆಗಳು : | ಕಿರುಕೊಂಬೆಗಳು ದುಂಡಾಗಿದ್ದು ರೋಮರಹಿತವಾಗಿರುತ್ತವೆ. |
ಎಲೆಗಳು : | ಎಲೆಗಳು ಸರಳವಾಗಿದ್ದು, ಪರ್ಯಾಯ ಮತ್ತು ಸುತ್ತು ಜೋಡನಾ ಮಾದರಿಯಲ್ಲಿರುತ್ತವೆ.ಪತ್ರಗಳು 12 – 46 X 3.2 – 10 ಸೆಂ ಮೀ. ವರೆಗಿನ ಗಾತ್ರ; ಅಂಡವೃತ್ತದಿಂದ ಬುಗುರಿ-ಭರ್ಜಿವರೆಗಿನ ಮಾದರಿಯ ಆಕಾರ,ಚೂಪಾದ ತುದಿ, ಚೂಪಾದ ಮತ್ತು ತಳಭಾಗಕ್ಕೆ ವಿಸ್ತರಿಸಿದ ಬುಡ, ತೀಕ್ಷ್ಣವಾಗಿ ಗರಗಸ ದಂತಿತವಾದ ಅಂಚು ಹೊಂದಿದ್ದು ರೋಮರಹಿತವಾಗಿರುತ್ತವೆ; ಮಧ್ಯ ನಾಳ ಪತ್ರದ ಮೇಲ್ಭಾಗದಲ್ಲಿ ಉಬ್ಬಿರುತ್ತದೆ; ಎರಡನೇ ದರ್ಜೆಯ ನಾಳಗಳು 10 ರಿಂದ 12 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ಓರೆಯಾಗಿ ಎಲೆದಿಂಡಿಗೆ ಅಡ್ಡವಾಗಿ ಕೂಡುವಂತವು. |
ಪುಷ್ಪಮಂಜರಿ/ಹೂಗಳು : | ಹೂಗಳು ಏಕಲಿಂಗಿಗಳಾಗಿದ್ದು ಗಂಡು ಮತ್ತು ಹೆಣ್ಣು ಹೂಗಳು ಪ್ರತ್ಯೇಕ ಸಸ್ಯಗಳಲ್ಲಿರುತ್ತವೆ; ಗಂಡು ಹೂಗಳು ಕಿರು ಗಾತ್ರದ ಕದಿರು ಮಂಜರಿಯಲ್ಲಿರುತ್ತವೆ; ಹೆಣ್ಣು ಹೂಗಳು ಅಕ್ಷಾಕಂಕುಳಿನಲ್ಲಿದ್ದು ಒಂಟಿಯಾಗಿರುತ್ತವೆ. |
ಕಾಯಿ /ಬೀಜ : | ಸಂಪುಟ ಫಲಗಳು 3 ಕೋಶಗಳನ್ನೊಳಗೊಂಡಿದ್ದು 3 ಬೀಜಗಳನ್ನು ಹೊಂದಿರುತ್ತವೆ. |