ಆರ್ಡಿಸಿಯ ಮಿಶನಿಸ್ Wall. ex A.DC - ಮಿರ್ಸಿನೇಸಿ

Synonym : ಆರ್ಡಿಸಿಯ ಪ್ಯಾನಿಕ್ಯುಲೇಟ Roxb. ಆರ್ಡಿಸಿಯ ಕೋರ್ತಾಲೆನ್ಸಿಸ್ Wt.

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 5 ಮೀ. ಎತ್ತರದವರೆಗಿನ ಸಣ್ಣ ಮರಗಳು ಅಥವಾ ದೊಡ್ಡ ಪೊದೆಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ಉಪ-ದುಂಡಾಗಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಮತ್ತು ಉಪ-ಆವರ್ತನ ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು ಅಂದಾಜು 0.5 ಸೆಂ.ಮೀ. ಉದ್ದವಿರುತ್ತವೆ ಅಥವಾ ಉಪ-ತೊಟ್ಟು ಸಹಿತವಾಗಿದ್ದು,ಕಾಲುವೆಗೆರೆ ಸಮೇತವಿದ್ದು ರೋಮರಹಿತವಾಗಿರುತ್ತವೆ;ಪತ್ರಗಳು 14.5 - 29 X 4.5 – 7.5 ಸೆಂ.ಮೀ.ವರೆಗಿನ ಗಾತ್ರವಿದ್ದು ಬುಗುರಿ-ಭರ್ಜಿಯ ಆಕಾರ ಹೊಂದಿದ್ದು, ಚೂಪಾದ ತುದಿ,ದುಂಡಾದುದರಿಂದ ಕಿವಿಯಾಕಾರದ ಬುಡ ,ನಯವಾದ ಅಂಚು ಹೊಂದಿರುತ್ತವೆ ಹಾಗೂ ಪಾರದರ್ಶಕ ಚುಕ್ಕೆಗಳಿಂದ ಕೂಡಿದ್ದು,ತೊಗಲನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತವಾಗಿರುತ್ತವೆ;ಮಧ್ಯ ನಾಳ ಮೇಲ್ಭಾಗದಲ್ಲಿ ಕಾಲುವೆ ಗೆರೆ ಸಮೇತವಾಗಿರುತ್ತವೆ; ಎರಡನೇ ದರ್ಜೆಯ ನಾಳಗಳು ಅಂದಾಜು 11 ರಿಂದ 16 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದಲ್ಲಿದ್ದು ಎಲೆ ದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪ ಮಂಜರಿಗಳು ಹೆಚ್ಚಿನ ಸಂದರ್ಭಗಳಲ್ಲಿಉಪಪೀಠಛತ್ರ ಸಂಯುಕ್ತ ಪುನರಾವೃತ್ತಿಯಾಗಿ ಕವಲೊಡೆಯುವ ಮಾದರಿಯವುಗಳಾಗಿದ್ದು ಅಗ್ರದಲ್ಲಿನ ಅಥವಾ ಕವಲುಗಳ ಪಾರ್ಶ್ವದಲ್ಲಿರುತ್ತವೆ; ವೃಂತ25 ಸೆಂ.ಮೀ. ಉದ್ದವಿದ್ದು ತುಕ್ಕು ಬಣ್ಣದ ಮೃದುತುಪ್ಪಳದಿಂದ ಕೂಡಿರುತ್ತವೆ; ಹೂಗಳು ನಸುಗೆಂಪು ಬಣ್ಣದಲ್ಲಿರುತ್ತವೆ.
ಕಾಯಿ / ಬೀಜ : ಬೆರ್ರಿ ಫಲಗಳು ಗೋಳಾಕಾರದಲ್ಲಿದ್ದು ಕೆಂಪು ಬಣ್ಣದವು;ಬೀಜ ಒಂದು.

ಜೀವಪರಿಸ್ಥಿತಿ :

800 ಮೀ.ವರೆಗಿನ ಎತ್ತರದ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಪ್ರಭೇದ ಕಂಡು ಬರುತ್ತದೆ.

ವ್ಯಾಪನೆ :

ದಕ್ಷಿಣ ಭಾರತ ಮತ್ತು ಶ್ರೀಲಂಕಾ;ಪಶ್ಚಿಮ ಘಟ್ಟದಲ್ಲಿ ಈ ಪ್ರಭೇದ ದಕ್ಷಿಣ ಸಹ್ಯಾದ್ರಿಯಲ್ಲಿ ಕಂಡು ಬರುತ್ತದೆ.

ಗ್ರಂಥ ಸೂಚಿ :

Prodr. 8: 130.1844;Gamble, Fl. Madras 2:756.1998(rep.ed.); Sasidharan, Biodiversity documentation for Kerala- Flowering Plants, part 6:264.2004;Saldanha, Fl. Karnataka 1: 346.1984..

Top of the Page