ಬೆಂಕಾರ ಮಲಬಾರಿಕ (Lam.) Tirveng. - ರೂಬಿಯೇಸಿ

ಪರ್ಯಾಯ ನಾಮ : ರಂಡಿಯ ಮಲಬಾರಿಕ Lam.

Vernacular names : Tamil: ಪುಡನ್,ಸಿರುಕರೈ,ಪಿಡತಿ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : ಸಣ್ಣ ಗಾತ್ರದ ಮರಗಳು.
ಕಾಂಡ ಮತ್ತು ತೊಗಟೆ : ಕಾಂಡ ಸಣ್ಣದಾದ,ಸರಳ ಅಥವಾ ಕವಲೊಡೆದ ಮುಳ್ಳುಗಳ ಸಮೇತವಿರುತ್ತವೆ; ತೊಗಟೆ ಬೂದು ಬಣ್ಣದಲ್ಲಿದ್ದು ಸೂಕ್ಷ್ಮ ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತವೆ;ಕಚ್ಚು ಮಾಡಿದ ಜಾಗ ಹಳದಿ.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ಉಪದುಂಡಾಗಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಕತ್ತರಿಯಾಕಾರದ ಅಭಿಮುಖ ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ಕಾವಿನೆಲೆಗಳು ತೊಟ್ಟುಗಳ ನಡುವೆ ಇದ್ದು ಉದುರಿ ಹೋದ ನಂತರ ಗುರುತುಗಳನ್ನು ಉಳಿಸುತ್ತವೆ; ತೊಟ್ಟು ಅಂದಾಜು 0.8 ಸೆಂ.ಮೀ.ವರೆಗಿನ ಉದ್ದವಿದ್ದು,ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರದಲ್ಲಿರುತ್ತದೆ ಮತ್ತು ರೋಮರಹಿತವಾಗಿರುತ್ತದೆ; ಪತ್ರಗಳು 3.5 -7.5 X 1.3–3 ಸೆಂ.ಮೀ. ಗಾತ್ರ, ಬುಗುರಿಯ ಆಕಾರ ಹೊಂದಿದ್ದು, ಚೂಪಲ್ಲದುದರಿಂದ ಮೊಂಡಾಗ್ರವುಳ್ಳ ಚಿಕ್ಕದಾಗಿ ಕ್ರಮೇಣ ಚೂಪಾಗುವ ತುದಿ, ಒಳಬಾಗಿದ ಬುಡ, ನಯವಾದ ಅಂಚು,ತೊಗಲ್ಲನ್ನೋಲುವ ಮೇಲ್ಮೈ ಹೊಂದಿದ್ದು ತಳಬಾಗದಲ್ಲಿ ರೋಮರಹಿತವಾಗಿರುತ್ತವೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಉಬ್ಬಿರುತ್ತದೆ;ಎರಡನೇ ದರ್ಜೆಯ ನಾಳಗಳು ಅಂದಾಜು 6 ಜೋಡಿಗಳಿದ್ದು ಅಕ್ಷಾಕಂಕುಳಿನಲ್ಲಿ ಸೂಕ್ಷ್ಮ ಸಹಜೀವಿ ಗೂಡುಗಳನ್ನು ಹೊಂದಿರುತ್ತವೆ; ಮೂರನೇ ದರ್ಜೆಯ ನಾಳಗಳು ಅಸ್ಪಷ್ಟ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಪೀಠಛತ್ರ ಮಾದರಿಯ ನೀಳಛತ್ರ ರೀತಿಯವುಗಳಾಗಿದ್ದು ಅಕ್ಷಾಕಂಕುಳಿನಲ್ಲಿರುತ್ತವೆ;ಹೂಗಳು ಬಿಳಿ-ಕೆನೆ ಬಣ್ಣದವು;ತೊಟ್ಟು ಅಂದಾಜು 0.5 ಸೆಂ.ಮೀ.ಉದ್ದವಿರುತ್ತವೆ.
ಕಾಯಿ / ಬೀಜ : ಬೆರ್ರಿಗಳು ಗೋಳಾಕಾರದವುಗಳಾಗಿದ್ದು ಶಾಶ್ವತವಾಗಿ ಉಳಿಯುವ ಪುಷ್ಪಪಾತ್ರೆಯ ಎಸಳುಗಳನ್ನುಳ್ಳ ಮುಕುಟದ ಸಮೇತವಿರುತ್ತವೆ;ಬೀಜಗಳು ಹಲವಾರು.

ಜೀವಪರಿಸ್ಥಿತಿ :

600 ಮೀ. ಎತ್ತರದ ಪ್ರದೇಶಗಳಲ್ಲಿನ ಒಣ ನಿತ್ಯ ಹರಿದ್ವರ್ಣದಿಂದ ಅರೆನಿತ್ಯ ಹರಿದ್ವರ್ಣದವರೆಗಿನ ಕಾಡುಗಳಲ್ಲಿ ಈ ಮರಗಳು ಬೆಳೆಯುತ್ತವೆ.

ವ್ಯಾಪನೆ :

ಭಾರತದ ಪರ್ಯಾಯ ದ್ವೀಪ ಮತ್ತು ಶ್ರೀಲಂಕಾ;ಪಶ್ಚಿಮ ಘಟ್ಟದ ಎಲ್ಲಾ ಪ್ರದೇಶಗಳು.

ಗ್ರಂಥ ಸೂಚಿ :

Taxon 32: 440. 1983;Gamble, Fl. Madras 2: 616. 1993 (re. ed); Sasidharan, Biodiversity documentation for Kerala- Flowering Plants, part 6: 210. 2004; Almeida, Fl. Maharashtra 3:3. 2001; Cooke, Fl. Bombay 1: 600. 1903.

Top of the Page