ಬೈರೊಸ್ಫಿಲ್ಲಮ್ ಟೆಟ್ರಾಂಡ್ರಮ್ (Bedd.) J.Hk. ex Bedd. - ರೂಬಿಯೇಸಿ

:

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 5 ಮೀ. ಎತ್ತರದವರೆಗಿನ ಸಣ್ಣ ಗಾತ್ರದ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು 4- ಕೋನಗಳ ಸಮೇತವಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಕತ್ತರಿಯಾಕಾರದ ಅಭಿಮುಖ ಜೋಡನಾ ವ್ಯವಸ್ಥೆಯ -ಲ್ಲಿರುತ್ತವೆ ; ಕಾವಿನೆಲೆಗಳು ದೊಡ್ಡಗಾತ್ರದವುಗಳಾಗಿದ್ದು ತೊಟ್ಟುಗಳ ನಡುವೆ ಇದ್ದು ಉದುರಿ ಹೋದ ನಂತರ ಗುರುತುಗಳನ್ನು ಉಳಿಸುತ್ತವೆ; ತೊಟ್ಟು 1 – 1.3 ಸೆಂ.ಮೀ. ವರೆಗಿನ ಉದ್ದವಿದ್ದು,ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರದಲ್ಲಿರುತ್ತದೆ ಮತ್ತು ರೋಮರಹಿತವಾಗಿರುತ್ತದೆ; ಪತ್ರಗಳು 6 -8.5 X 2.7–3.2 ಸೆಂ.ಮೀ. ಗಾತ್ರ, ಅಂಡವೃತ್ತ, ಅಂಡವೃತ್ತ- ಬುಗುರಿಯ ಆಕಾರ ಹೊಂದಿದ್ದು, ಚೂಪಲ್ಲದ ತುದಿ, ಒಳಬಾಗಿದ ಬುಡ, ನಯವಾದ ಮತ್ತು ಹಿಂಸುರುಳಿಗೊಂಡ ಅಂಚು, ತೊಗಲ್ಲನ್ನು ಹೋಲುವ ಮೇಲ್ಮೈ ಹೊಂದಿದ್ದು ರೋಮರಹಿತವಾಗಿರುತ್ತವೆ;ಮಧ್ಯನಾಳ ಮೇಲ್ಭಾಗದಲ್ಲಿ ಉಬ್ಬಿರುತ್ತದೆ; ಎರಡನೇ ದರ್ಜೆಯ ನಾಳಗಳು ಅಂದಾಜು 7 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ಅಸ್ಪಷ್ಟ.
ಪುಷ್ಪಮಂಜರಿ / ಹೂಗಳು : ಹೂಗಳು ದೊಡ್ಡ ಗಾತ್ರದವು ಹಾಗೂ ಏಕಲಿಂಗಿಗಳು;ಗಂಡು ಹೂಗಳು ಸಂಖ್ಯೆಯಲ್ಲಿ ಕೆಲವು ಇದ್ದು ನೀಳಛತ್ರ ಪುಷ್ಪಮಂಜರಿಗಳಲ್ಲಿರುತ್ತವೆ;ಹೆಣ್ಣು ಹೂಗಳು ಬಿಳಿ ಅಥವಾ ಗುಲಾಬಿ ಬಣ್ಣದಲ್ಲಿದ್ದು ಒಂಟಿಯಾಗಿ ಅಥವಾ ಜೋಡಿಗಳಾಗಿ ತುದಿಯಲ್ಲಿರುತ್ತವೆ;ತೊಟ್ಟು ಅಂದಾಜು 1.5 ಸೆಂ.ಮೀ. ಉದ್ದವಿರುತ್ತವೆ.
ಕಾಯಿ / ಬೀಜ : ಬೆರ್ರಿಗಳು ಗೋಳಾಕಾರದವುಗಳಾಗಿದ್ದು ಅಂದಾಜು 2 ಸೆಂ.ಮೀ.ಅಡ್ಡಗಲತೆಯನ್ನು ಹೊಂದಿದ್ದು 2 ಕೋಶಗಳನ್ನೊಳಗೊಂಡಿರುತ್ತವೆ;ಬೀಜಗಳು ಹಲವಾರು.

ಜೀವಪರಿಸ್ಥಿತಿ :

1100 ಮತ್ತು 1800 ಮೀ. ನಡುವಿನ ಎತ್ತರದ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳ ಒಳಚಾವಣಿಯಲ್ಲಿ ಈ ಮರಗಳು ಬೆಳೆಯುತ್ತವೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ಅಗಸ್ತ್ಯಮಲೈ ಬೆಟ್ಟ ಪ್ರದೇಶದಲ್ಲಿ ಕಂಡುಬರುತ್ತದೆ.

ಸ್ಥಿತಿ :

ದುರ್ಬಲ ಸ್ಥಿತಿ (IUCN 2000).

ಗ್ರಂಥ ಸೂಚಿ :

Fl. Sylv. t. 326. 1873; Gamble, Fl. Madras 2: 613. 1993 (re. ed); Sasidharan, Biodiversity documentation for Kerala- Flowering Plants, part 6: 210. 2004.

Top of the Page