ಕ್ಲೈಸ್ಟಾಂನ್ತಸ್ ಟ್ರವಂಕೊರೆನ್ಸಿಸ್ Jablonszky - ಯೂಫೊರ್ಬಿಯೇಸಿ

:

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 6 ಮೀ. ಎತ್ತರದವರೆಗಿನ ಸಣ್ಣ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ದುಂಡಾಗಿದ್ದು, ಸೂಕ್ಷ್ಮ ರೋಮಗಳನ್ನು ಹೊಂದಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು, ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಲಂಬ ಸಾಲಿನಲ್ಲಿರುತ್ತವೆ;ಕಾವಿನೆಲೆಗಳು ಪಾರ್ಶ್ವದಲ್ಲಿದ್ದು, ಕಿರುಗಾತ್ರದವುಗಳಾಗಿದ್ದು ಅಂದಾಜು 0.1 ಸೆಂ.ಮೀ. ಉದ್ದವಿದ್ದು ಉಪಶಾಶ್ವತವಾಗಿರುತ್ತವೆ; ತೊಟ್ಟುಗಳು 0.3 -0.5 ಸೆಂ.ಮೀ. ವರೆಗಿನ ಉದ್ದವಿದ್ದು ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರ ಹೊಂದಿರುತ್ತವೆ,ಮತ್ತು ಒಣಗಿದಾಗ ಸುಕ್ಕು ಸುಕ್ಕಾಗಿರುತ್ತವೆ,ಎಳೆಯದಾಗಿದ್ದಾಗ ಸುಕ್ಕು ಸುಕ್ಕಾದ ರೋಮಗಳಿಂದ ಕೂಡಿರುತ್ತವೆ;ಪತ್ರಗಳು 7-12 X 2.5-3.3 ಸೆಂ.ಮೀ. ಗಾತ್ರ,ಸಂಕುಚಿತ ಅಂಡವೃತ್ತದಿಂದ ಭರ್ಜಿವರೆಗಿನ ಆಕಾರ ಹೊಂದಿದ್ದು,ಉದ್ದವಾದ ಕ್ರಮೇಣ ಚೂಪಾಗುವ ತುದಿ, ಚೂಪಾದ ಬುಡ, ನಯವಾದ ಅಂಚು ಹೊಂದಿದ್ದು, ತಳಭಾಗ ಮಾಸಲು ಬೂದು ಹಸಿರು ಬಣ್ಣದಲ್ಲಿದ್ದು ರೋಮರಹಿತವಾಗಿರುತ್ತವೆ;ಮಧ್ಯ ನಾಳ ಮೇಲ್ಭಾಗದಲ್ಲಿ ಕಾಲುವೆಗೆರೆಯನ್ನು ಹೊಂದಿರುತ್ತದೆ; ಎರಡನೇ ದರ್ಜೆಯ ನಾಳಗಳು 6 ರಿಂದ 8 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಹೂಗಳು ಏಕಲಿಂಗಿಗಳಾಗಿದ್ದು ,ಉಪತೊಟ್ಟುಗಳನ್ನು ಹೊಂದಿದ್ದು,ಅಕ್ಷಾಕಂಕುಳಿನಲ್ಲಿ ಗುಚ್ಛಗಳಲ್ಲಿರುತ್ತವೆ.
ಕಾಯಿ / ಬೀಜ : ಸಂಪುಟ ಫಲಗಳು 3-ಕವಾಟಗಳನ್ನೊಳಗೊಂಡಿದ್ದು,1.5 ಸೆಂ.ಮೀ, ಅಡ್ಡಗಲತೆ ಹೊಂದಿರುತ್ತವೆ;ಪ್ರತಿ ಕೋಶದಲ್ಲಿ 2 ಬೀಜಗಳಿರುತ್ತವೆ.

ಜೀವಪರಿಸ್ಥಿತಿ :

400 ಮತ್ತು 1000 ಮೀ. ನಡುವಿನ ಎತ್ತರದ ಪ್ರದೇಶಗಳಲ್ಲಿನ ತೇವಾಂಶದಿಂದ ಕೂಡಿದ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿಈ ಸಸ್ಯ ಬೆಳೆಯುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಮತ್ತು ಮಧ್ಯ ಸಹ್ಯಾದ್ರಿ ಪ್ರದೇಶಗಳಲ್ಲಿ ಕಂಡುಬರುತ್ತದೆ.

ಸ್ಥಿತಿ :

ಉಳಿವಿನ ಆತಂಕಕಾರಿ ಸ್ಥಿತಿ (IUCN,2000)

ಗ್ರಂಥ ಸೂಚಿ :

Engler, Pflanzenr. 65 21.1915; Gamble, Fl. Madras 21283.1993 (re.ed); Sasidharan, Biodiversity documentation for Kerala- Flowering Plants, part 6 412. 2004.

Top of the Page