ಕ್ರಿಪ್ಟೋಕಾರ್ಯ ಅನಮಲಯಾನ Gamble - ಲಾರೇಸಿ

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 8 ಮೀ.ವರೆವಿಗೆ ಬೆಳೆಯುವ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಉಪ-ದುಂಡಾಗಿದ್ದು ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದ ದಟ್ಟ ಮೃದು ತುಪ್ಪಳದಿಂದ ಕೂಡಿರುತ್ತದೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಹಾಗೂ ಸುತ್ತು ಜೋಡನಾ ವ್ಯವಸ್ಥೆಯಲ್ಲಿ -ರುತ್ತವೆ;ತೊಟ್ಟುಗಳು 1-2 ಸೆಂ.ಮೀ. ಉದ್ದವಿರುತ್ತದೆ ಮತ್ತು ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದಿಂದ ಕೂಡಿರುತ್ತದೆ; ಪತ್ರಗಳು 13 X 6.5 ಸೆಂ.ಮೀ.ವರೆಗಿನ ಗಾತ್ರ ಹೊಂದಿದ್ದು ಅಂಡವೃತ್ತ-ಚತುರಸ್ರದ ಆಕಾರ ಹೊಂದಿದ್ದು ತೀಕ್ಷ್ಣವಾದ ಮೊನಚುಳ್ಳ ಕ್ರಮೇಣ ಚೂಪಾಗುವ ತುದಿ, ಚೂಪಾದ ಬುಡ ಹೊಂದಿರುತ್ತವೆ;ಪತ್ರಗಳ ಎರಡೂ ಬದಿಗಳ ನಾಳಗಳು ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದ ದಟ್ಟವಾದ ಮೃದು ತುಪ್ಪಳದಿಂದ ಕೂಡಿ;ಪತ್ರದ ತಳಭಾಗ ಮಾಸಲು ಬೂದು ಹಸಿರು ಬಣ್ಣ ಹೊಂದಿರುತ್ತದೆ;ಮಧ್ಯ ನಾಳ ಪತ್ರದ ಮೇಲ್ಭಾಗದಲ್ಲಿ ಉಬ್ಬಿರುತ್ತದೆ;ಎರಡನೇ ದರ್ಜೆಯ ನಾಳಗಳು ಅಂದಾಜು 8 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ದೃಢವಾಗಿದ್ದು ಓರೆಯಾಗಿ ಎಲೆದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ/ಹೂಗಳು : ಹೂಗಳು ಕಿರು ಗಾತ್ರದವುಳ್ಳ, ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣ ಹೊಂದಿದ ಪ್ರಮುಖವಾದ ವೃಂತಪತ್ರಕಗಳು ಮತ್ತು ಕಿರುವೃಂತಪತ್ರಕಗಳ ಸಮೇತವಿರುವ ಅಕ್ಷಾಕಂಕುಳಿನಲ್ಲಿರುವ ಮಧ್ಯಾರಂಭಿ ಪುಷ್ಪಮಂಜರಿಯಲ್ಲಿರುತ್ತವೆ.
ಕಾಯಿ /ಬೀಜ : ಕಾಯಿಗಳು ಡ್ರೂಪ್ ಮಾದರಿಯವುಗಳಾಗಿದ್ದು ಒಂದು ಬೀಜವನ್ನು ಒಳಗೊಂಡಿರುತ್ತವೆ.

ಜೀವಪರಿಸ್ಥಿತಿ :

1000 ದಿಂದ1400 ಮೀ. ನಡುವಿನ ಮಧ್ಯಮ ಎತ್ತರದಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳಲ್ಲಿನ ಒಳಛಾವಣಿ ಮರಗಳಾಗಿ ಈ ಪ್ರಭೇದ ಅಪರೂಪವಾಗಿ ಕಂಡು ಬರುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ಅಗ ಸ್ತ್ಯಮಲೈ, ಪೆರಿಯಾರ್ ಪ್ರದೇಶ ಮತ್ತು ದಕ್ಷಿಣ ಸಹ್ಯಾದ್ರಿಯ ಅಣ್ಣಾಮಲೈನಲ್ಲಿ ವ್ಯಾಪಿಸಿದೆ.

ಸ್ಥಿತಿ :

ದುರ್ಬಲ ಸ್ಥಿತಿ (IUCN 2000).

ಗ್ರಂಥ ಸೂಚಿ :

Kew Bull. 1925. 126; Gamble, Fl. Madras 2: 1218. 1993 (re. ed); Sasidharan, Biodiversity documentation for Kerala- Flowering Plants, part 6: 397. 2004.

Top of the Page