ಡ್ರೈಪೆಟೆಸ್ ಎಲೇಟ (Bedd.) Pax. & Hoffm. - ಯೂಫೊರ್ಬಿಯೇಸಿ

Synonym : ಹೆಮಿಸೈಕ್ಲಿಯ ಎಲೇಟ Bedd.

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 30 ಮೀ. ಎತ್ತರದವರೆಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಆಳವಾದ ಕೊರಕಲುಗಳನ್ನು ಹೊಂದಿರುತ್ತದೆ ಮತ್ತು ರೋಮರಹಿತವಾಗಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿರುತ್ತವೆ ಹಾಗೂ ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಜೋಡನಾ ವ್ಯವಸ್ಥೆಯಲ್ಲಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಲಂಬಸಾಲಿನಲ್ಲಿರುತ್ತವೆ; ತೊಟ್ಟುಗಳು 0.5-1.3 ಸೆಂ.ಮೀ. ಉದ್ದವಿದ್ದು ಕಾಲುವೆಗೆರೆ ಸಮೇತವಿರುತ್ತವೆ ಹಾಗೂ ರೋಮರಹಿತವಾಗಿರುತ್ತವೆ; ಪತ್ರಗಳು 8-13 X 3 – 6.5 ಸೆಂ ಮೀ. ಗಾತ್ರ, ಸಂಕುಚಿತ ಅಂಡವೃತ್ತದ ಆಕಾರ ಹೊಂದಿರುತ್ತವೆ; ಪತ್ರಗಳು ಮೊಂಡಾದ ಅಗ್ರವುಳ್ಳ ಕ್ರಮೇಣ ಚೂಪಾಗುವ ತುದಿ ಹಾಗೂ ಚೂಪಾದ ಮತ್ತು ಕೊಂಚ ಅಸಮವಾದ ಬುಡವನ್ನು ಹೊಂದಿರುತ್ತವೆ; ಅಂಚು ನಯವಾಗಿರುತ್ತದೆ;ಮೇಲ್ಮೈ ತೊಗಲನ್ನೋಲುವ ಮಾದರಿಯಲ್ಲಿದ್ದು ಹೊಳಪನ್ನು ಹೊಂದಿರುತ್ತದೆ ಮತ್ತು ರೋಮರಹಿತವಾಗಿರುತ್ತದೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಚಪ್ಪಟೆಯಾಗಿರುತ್ತದೆ;ಎರಡನೇ ದರ್ಜೆಯ ನಾಳಗಳು 7-12 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ಜಾಲಬಂಧ ನಾಳ ವಿನ್ಯಾಸ ಹೊಂದಿದ್ದು ಎಲೆ ದಿಂಡಿಗೆ ಅಡ್ಡವಾಗಿರುತ್ತವೆ.
ಪುಷ್ಪಮಂಜರಿ/ಹೂಗಳು : ಹೂಗಳು ಏಕಲಿಂಗಿಗಳಾಗಿರುತ್ತವೆ ಮತ್ತು ಗಂಡು ಮತ್ತು ಹೆಣ್ಣು ಹೂಗಳು ಪ್ರತ್ಯೇಕ ಸಸ್ಯಗಳಲ್ಲಿರುತ್ತವೆ; ಗಂಡು ಹೂಗಳು ಹಸಿರು ಮಿಶ್ರಿತ ಬಿಳಿ ಬಣ್ಣದಲ್ಲಿದ್ದು ಅಕ್ಷಾಕಂಕುಳಿನಲ್ಲಿನ ಗುಚ್ಛಗಳಲ್ಲಿರುತ್ತವೆ;ಹೆಣ್ಣು ಹೂಗಳು ಒಂಟಿಯಾಗಿದ್ದು ಉದ್ದವಾದ ತೊಟ್ಟುಗಳ ಸಮೇತವಿರುತ್ತವೆ.
ಕಾಯಿ /ಬೀಜ : ಸಂಪುಟ ಫಲಗಳು ಬುಗುರಿಯಾಕಾರದಲ್ಲಿದ್ದು, 2.5 ಸೆಂ ಮೀ. ವರೆಗಿನ ಉದ್ದವನ್ನು ಹೊಂದಿರುತ್ತವೆ ಮತ್ತು ಪತ್ರೆಯುಳ್ಳ 1 ಬೀಜವಳನ್ನೊಳಗೊಂಡಿರುತ್ತವೆ.

ಜೀವಪರಿಸ್ಥಿತಿ :

300 ರಿಂದ 900 ಮೀ. ನಡುವಿನ ಕಡಿಮೆ ಎತ್ತರದ ಪ್ರದೇಶಗಳ ತೇವಾಂಶವುಳ್ಳ ನಿತ್ಯ ಹರಿದ್ವರ್ಣದ ಕಾಡುಗಳಲ್ಲಿ ಬಹುತೇಕವಾಗಿ ಮೇಲ್ಛಾವಣಿ ಮರಗಳಾಗಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಮತ್ತು ಮಧ್ಯ ಸಹ್ಯಾದ್ರಿಯಲ್ಲಿ ಕಂಡುಬರುತ್ತದೆ.

ಗ್ರಂಥ ಸೂಚಿ :

Engler, Pflanzenr. 81. 268.1922;Gamble, Fl.Madras 2:1300.1993 (rep.ed.).

Top of the Page