ಡ್ರೈಪೆಟೆಸ್ ಸಬ್ಸೆಸೈಲಿಸ್ (Kurz) Pax & Hoffm. - ಯೂಫೊರ್ಬಿಯೇಸಿ

Synonym : ಸೈಕ್ಲೋಸ್ಟೆಮಾನ್ ಸಬ್ಸೆಸೈಲಿಸ್

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : ಅಂದಾಜು 20 ಮೀ. ಎತ್ತರದವರೆಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ಕಂಡ ಕೊರಕಲುಗಳನ್ನೊಳಗೊಂಡ ಮಾದರಿಯವು; ತೊಗಟೆ ಬೂದು ಬಣ್ಣದಲ್ಲಿದ್ದು ನಯವಾಗಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿರುತ್ತವೆ ಮತ್ತು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಹಾಗು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 0.5 – 0.9 ಸೆಂಮೀ.ಉದ್ದವಿದ್ದು ರೋಮರಹಿತವಾಗಿರುತ್ತವೆ; ಪತ್ರಗಳು 8 -19 X 3.5 – 6 ಸೆಂ. ಮೀ. ಗಾತ್ರ, ಚತುರಸ್ರದಿಂದ ಅಂಡವೃತ್ತವರೆಗಿನ ಆಕಾರ ಹೊಂದಿರುತ್ತವೆ; ಪತ್ರಗಳ ತುದಿ , ಕ್ರಮೇಣವಾಗಿ ಚೂಪಾಗುವ ಮಾದರಿಯಲ್ಲಿದ್ದು ಬುಡ ಅಸಮವಾಗಿರುತ್ತದೆ. ಅಂಚು ಎಳೆಯದಾಗಿದ್ದಾಗ ತೀಕ್ಷ್ಣವಾದ ಸೂಕ್ಷ್ಮದಂತಿತವಾಗಿರುತ್ತದೆ ಮತ್ತು ಬಲಿತಾಗ ಉಪ-ದುಂಡೇಣುಗಳ ಸಮೇತವಿರುತ್ತದೆ;ಮೇಲ್ಮೈ ತೊಗಲನ್ನೋಲುವ ಮಾದರಿಯಲ್ಲಿದ್ದು ನುಣುಪಿನ ಹೊಳಪನ್ನು ಹೊಂದಿರುತ್ತದೆ ಮತ್ತು ರೋಮರಹಿತವಾಗಿರುತ್ತದೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಮೇಲೆದ್ದಿರುತ್ತದೆ; ಎರಡನೇ ದರ್ಜೆಯ ನಾಳಗಳು ಅಂದಾಜು 7 ಜೋಡಿಗಳಿದ್ದು ಪ್ರಮುಖವಾಗಿರುತ್ತವೆ; ಮೂರನೇ ದರ್ಜೆಯ ನಾಳಗಳು ಹೆಚ್ಚಿನ ಅಂತರವನ್ನೊಳಗೊಂಡಿದ್ದು ಎಲೆದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ/ಹೂಗಳು : ಪುಷ್ಪಮಂಜರಿ ಗಳು ಅಕ್ಷಾಕಂಕುಳಿನಲ್ಲಿರುತ್ತವೆ ಮತ್ತು ಹೂಗಳು ಕವಲುಗಳ ಮೇಲಿರುತ್ತವೆ.
ಕಾಯಿ /ಬೀಜ : ಫಲಗಳು ಡ್ರೂಪ್ ಮಾದರಿಯವು.

ಜೀವಪರಿಸ್ಥಿತಿ :

600 ಮೀ. ಎತ್ತರದವರೆಗಿನ ತೇವಾಂಶದಿಂದ ಕೂಡಿದ ನಿತ್ಯ ಹರಿದ್ವರ್ಣ ಅಪರೂಪವಾಗಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಭಾರತ;ಪಶ್ಚಿಮ ಘಟ್ಟದಲ್ಲಿ ಈ ಪ್ರಭೇದ ದಕ್ಷಿಣ,ಮಧ್ಯ ಸಹ್ಯಾದ್ರಿ ಪ್ರದೇಶಗಳಲ್ಲಿ ಕಂಡುಬರುತ್ತದೆ.

ಗ್ರಂಥ ಸೂಚಿ :

Kurz, Engl., Pflanzenr. 4: 147.25.248.1922

Top of the Page