ಯೂರ್ಯ ನಿಟಿಡ Korth. - ತಿಯೇಸಿ

ಪರ್ಯಾಯ ನಾಮ : ಯೂರ್ಯ ಜಪಾನಿಕThunb.

Vernacular names : Malayalam: ಹುಲುನಿ,ಮುಕ್ಕುರೊಣೆ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 5 ಮೀ. ಎತ್ತರದವರೆಗಿನ ಸಣ್ಣ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಕಂದು ಬಣ್ಣದಲ್ಲಿದ್ದು,ನಯವಾಗಿರುತ್ತದೆ;ಕಚ್ಚು ಮಾಡಿದ ಜಾಗ ಕಂದು ಬಣ್ಣದಲ್ಲಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಕೋನಯುಕ್ತವಾಗಿದ್ದು ಪಾರ್ಶ್ವದಲ್ಲಿರುವ ಎರಡು ಏಣುಗಳ ಸಮೇತವಿರುತ್ತವೆ, ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಜೋಡನಾ ವ್ಯವಸ್ಥೆಯಲ್ಲಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಲಂಬ ಸಾಲಿನಲ್ಲಿರುತ್ತವೆ; ತೊಟ್ಟುಗಳು 0.3 – 1 ಸೆಂ.ಮೀ.ವರೆಗಿನ ಉದ್ದವಿದ್ದು,ಕಾಲುವೆಗೆರೆ ಸಮೇತವಿರುತ್ತವೆ ಮತ್ತು ರೋಮರಹಿವಾಗಿರುತ್ತವೆ; ಪತ್ರಗಳು 2.5 – 10 X 1.5–4 ಸೆಂ.ಮೀ. ಗಾತ್ರ,ಅಂಡವೃತ್ತದಿಂದ ಅಂಡವೃತ್ತ – ಬುಗುರಿಭರ್ಜಿ ಯವರೆಗಿನ ಆಕಾರ ಹೊಂದಿದ್ದು, ಅಗಲವಾದ ಹಾಗೂ ದುಂಡನೆಯ ತುದಿ ಮತ್ತು ತಗ್ಗುಳ್ಳ ಅಗ್ರ ಹೊಂದಿದ ಕ್ರಮೇಣ ಚೂಪಾಗುವ ತುದಿ,ಚೂಪಾದ ಮಾದರಿಯಿಂದ ಬೆಣೆಯಾಕಾರ ದವರೆಗಿನ ಬುಡ, ಸೂಕ್ಷ್ಮ ಗರಗಸ ದಂತಿತವಾದ ಅಂಚು ಹೊಂದಿದ್ದು ರೋಮರಹಿತ ವಾಗಿರುತ್ತವೆ, ಪತ್ರಗಳ ಮೇಲ್ಮೈ ತೊಗಲನ್ನೋಲುವ ಮಾದರಿಯಲ್ಲಿದ್ದು,ಕಡುಹಸಿರು ಬಣ್ಣ ಮತ್ತು ಹೊಳಪನ್ನುಳ್ಳ ಮೇಲ್ಭಾಗ,ಮಾಸಲು ಬಣ್ಣದ ತಳಭಾಗವನ್ನು ಹೊಂದಿರುತ್ತವೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಸ್ವಲ್ಪಮಟ್ಟಿನ ಕಾಲುವೆಗೆರೆ ಸಮೇತವಿರುತ್ತದೆ;ಎರಡನೇ ದರ್ಜೆಯ ನಾಳಗಳು 8 ಜೋಡಿಗಳವರೆಗೆ ಇದ್ದು, ಮೇಲ್ಭಾಗದಲ್ಲಿ ಅಚ್ಚೊತ್ತಿದಂತಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಹೂಗಳು ಏಕಲಿಂಗಿಗಳು, ಹಸಿರು ಮಿಶ್ರಿತ ಬಿಳಿ ಬಣ್ಣದಲ್ಲಿದ್ದು, ಅಕ್ಷಾಕಂಕುಳಿನಲ್ಲಿನ ಗುಚ್ಛಗಳಲ್ಲಿರುತ್ತವೆ,ಉಪತೊಟ್ಟುಗಳನ್ನು ಹೊಂದಿರುತ್ತವೆ.
ಕಾಯಿ / ಬೀಜ : ಬೆರ್ರಿಗಳು ಗೋಳಾಕಾರದಲ್ಲಿದ್ದು,ಕಳಿತಾಗ ಕೆನ್ನೀಲಿ ಮಿಶ್ರಿತ ಕಪ್ಪು ಬಣ್ಣದಲ್ಲಿರುತ್ತವೆ;ಬೀಜಗಳ ಸಂಖ್ಯೆ ಹಲವಾರು.

ಜೀವಪರಿಸ್ಥಿತಿ :

700 ಮತ್ತು 2200 ಮೀ. ನಡುವಿನ ಮಧ್ಯಮ ಮತ್ತು ಅತಿಎತ್ತರದ ನಿತ್ಯ ಹರಿದ್ವರ್ಣ ಕಾಡುಗಳ ಅಂಚಿನಲ್ಲಿ ಈ ಮರಗಳು ಬೆಳೆಯುತ್ತವೆ.

ವ್ಯಾಪನೆ :

ಇಂಡೋಮಲೇಸಿಯ ಮತ್ತು ಚೈನ;ಪಶ್ಚಿಮ ಘಟ್ಟದ ದಕ್ಷಿಣ ಮತ್ತು ಮಧ್ಯ ಸಹ್ಯಾದ್ರಿಯಲ್ಲಿ ಈ ಪ್ರಭೇದ ವ್ಯಾಪಿಸಿದೆ.

ಗ್ರಂಥ ಸೂಚಿ :

Temminck, Verh. Nat. Gesch. Bot. 3: 115. t. 17. 1840; Gamble, Fl. Madras 1: 79. 1997 (re. ed); Sasidharan, Biodiversity documentation for Kerala- Flowering Plants, part 6: 43. 2004

Top of the Page