ಹೆಲಿಸಿಯ ನೀಲಗಿರಿಕ Bedd. - ಪ್ರೋಟಿಯೇಸಿ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 8 ಮೀ. ಎತ್ತರದವರೆಗಿನ ಸಣ್ಣ ಗಾತ್ರದ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಉಪ-ದುಂಡಾಗಿದ್ದು ರೋಮರಹಿತವಾಗಿರುತ್ತವೆ
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 0.5 –1.5 ಸೆಂ.ಮೀ.ವರೆಗಿನ ಉದ್ದವಿದ್ದು,ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರವನ್ನು ಹೊಂದಿದ್ದು ಉಬ್ಬಿದ ಬುಡ ಹೊಂದಿರುತ್ತದೆ ಮತ್ತು ರೋಮರಹಿತವಾಗಿರುತ್ತವೆ; ಪತ್ರಗಳು6 -9 X 2.5–4 ಸೆಂ.ಮೀ. ಗಾತ್ರ, ಅಂಡವೃತ್ತದಿಂದ ಅಂಡವೃತ್ತ-ಬುಗುರಿಯವರೆಗಿನ ಅಥವಾ ಕೆಲವು ವೇಳೆ ಚಮಚದ ಆಕಾರ ಹೊಂದಿದ್ದು, ಕ್ರಮೇಣ ಚೂಪಾಗುವ ಮಾದರಿಯ ತುದಿ, ಬೆಣೆಯಾಕಾರದ ಬುಡ, ಹೆಚ್ಚಿನ ಅಂತರದಲ್ಲಿ ದಂತಿತವಾದ ಅಂಚನ್ನು ಹೊಂದಿರುತ್ತವೆ,ದಂತಿತವಾದ ಜಾಗದಲ್ಲಿ ರಸಗ್ರಂಥಿಗಳು ಇರುತ್ತವೆ,ಪತ್ರಗಳು ತೊಗಲನ್ನೋಲುವ ಮಾದರಿಯಲ್ಲಿದ್ದು ರೋಮರಹಿತವಾಗಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಉಬ್ಬಿರುತ್ತದೆ;ಎರಡನೇ ದರ್ಜೆಯ ನಾಳಗಳು ಅಂದಾಜು 6 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಅಕ್ಷಾಕಂಕುಳಿನಲ್ಲಿನ ಮಧ್ಯಾಭಿಸರದ ಮಾದರಿಯಲ್ಲಿರುತ್ತವೆ;ಹೂಗಳು ಉಪ- ತೊಟ್ಟುಗಳನ್ನು ಹೊಂದಿದ್ದು ಕೆನ್ನೀಲಿ ಛಾಯೆಯುಳ್ಳ ಬಿಳಿ ಬಣ್ಣದಲ್ಲಿರುತ್ತವೆ.
ಕಾಯಿ / ಬೀಜ : ಡ್ರೂಪ್ ಗಳು ಗೋಳಾಕಾರದಲ್ಲಿದ್ದು 1- 1.5 ಸೆಂ.ಮೀ. ಅಡ್ಡಗಲತೆ ಹೊಂದಿದ್ದು ಹಸಿರು ಬಣ್ಣ ಹೊಂದಿರುತ್ತವೆ;ಬೀಜಗಳು 1 ರಿಂದ 2 ಇದ್ದು ಸುಕ್ಕುಸುಕ್ಕಾದ ಮೇಲ್ಮೈ ಹೊಂದಿರುತ್ತವೆ.

ಜೀವಪರಿಸ್ಥಿತಿ :

500 ಮತ್ತು 1700 ಮೀ.ನಡುವಿನ ಎತ್ತರದ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಮರಗಳು ಬೆಳೆಯುತ್ತವೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಸಹ್ಯಾದ್ರಿ ಪ್ರದೇಶದಲ್ಲಿ ಕಂಡು ಬರುತ್ತದೆ.

ಗ್ರಂಥ ಸೂಚಿ :

Madras J. Lit. Sci. ser.3,1:50.t.11.1864; Gamble, Fl. Pres.Madras 2:1243.:1993(rep.ed.); Sasidharan, Biodiversity documentation for Kerala- Flowering Plants,part 6:401.2004;Saldanha,Fl. Karnataka 2:55.1996.

Top of the Page