ಹೊಮಾಲಿಯಮ್ ಟ್ರವಂಕೋರಿಕಂ Bedd. - ಫ್ಲಕೋರ್ಶಿಯೇಸಿ

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 12 ಮೀ. ಎತ್ತರದವರೆಗೆ ಬೆಳೆಯುವ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮಾದರಿಯಲ್ಲಿ ಜೋಡಣೆಗೊಂಡಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಸಾಲಿನಲ್ಲಿರುತ್ತವೆ. ತೊಟ್ಟುಗಳು 0.8-1.2 ಸೆಂ.ಮೀ. ವರೆಗಿನ ಉದ್ದ ಹೊಂದಿದ್ದು ಮೇಲ್ಭಾಗದಲ್ಲಿ ಚಪ್ಪಟೆಯಾಗಿರುತ್ತವೆ;ಪತ್ರಗಳು 4.5-10 X 2.3-5 ಸೆಂ.ಮೀ.ಗಾತ್ರ ಹೊಂದಿದ್ದು ಅಂಡಾಕಾರದಲ್ಲಿದ್ದು,ಚೂಪಾದುದರಿಂದ ಕ್ರಮೇಣ ಚೂಪಾಗುವ ತುದಿ,ಚೂಪಾದ ಬುಡ,ದುಂಡೇಣಿನ ದಂತವುಳ್ಳ ಅಂಚು ಹೊಂದಿರುತ್ತವೆ;ಮೇಲ್ಮೈ ತೊಗಲನ್ನೋಲುವ ಮಾದರಿಯಲ್ಲಿದ್ದು ರೋಮರಹಿತವಾಗಿರುತ್ತದೆ;ಮಧ್ಯ ನಾಳ ಪತ್ರದ ಮೇಲ್ಭಾಗದಲ್ಲಿ ಕೊಂಚ ಮೇಲೆದ್ದಿರುತ್ತದೆ;ಎರಡನೇ ದರ್ಜೆಯ ನಾಳಗಳು 6-8 ಜೋಡಿಗಳಿರುತ್ತವೆ ಮತ್ತು ಆರೋಹಣ ಮಾದರಿಯಲ್ಲಿರುತ್ತವೆ;ಮೂರನೇ ದರ್ಜೆಯ ನಾಳಗಳು ಜಾಲಬಂಧ ನಾಳ ವಿನ್ಯಾಸದಲ್ಲಿದ್ದು ಎಲೆ ದಿಂಡಿಗೆ ಅಡ್ಡವಾಗಿ ಕೂಡುವಂತವು.
ಪುಷ್ಪಮಂಜರಿ/ಹೂಗಳು : ಹೂಗಳು ಕಿರಿದಾದ ಗಾತ್ರ ಹೊಂದಿದ್ದು ,ಹಸಿರು ಮಿಶ್ರಿತ ಬಿಳಿ ಬಣ್ಣದಲ್ಲಿದ್ದು ದಟ್ಟವಾದ, ಅಕ್ಷಾಕಂಕುಳಿನಲ್ಲಿರುವ ಕದಿರುಮಂಜರಿಯಲ್ಲಿರುತ್ತವೆ.
ಕಾಯಿ /ಬೀಜ : ಸಂಪುಟ ಫಲ ಅನೇಕ ಬೀಜಗಳನ್ನು ಹೊಂದಿರುತ್ತದೆ.

ಜೀವಪರಿಸ್ಥಿತಿ :

1200 ಮೀ. ಎತ್ತರದವರೆಗಿನ ತೇವಾಂಶವುಳ್ಳ ನಿತ್ಯಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಅಪರೂಪವಾಗಿ ಕಂಡು ಬರುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಸಹ್ಯಾದ್ರಿಯಲ್ಲಿ ಮತ್ತು ತಮಿಳುನಾಡಿನ ಪಾಲ್ಘಾಟ್ ಬೆಟ್ಟಗಳಲ್ಲಿ ಕಂಡುಬರುತ್ತದೆ.

ಸ್ಥಿತಿ :

ದುರ್ಬಲ ಸ್ಥಿತಿ (IUCN 2000)

ಗ್ರಂಥ ಸೂಚಿ :

Fl. Sylv. 211. 1872; Gamble, Fl. Madras 1: 523.1997 (re. ed); Sasidharan, Biodiversity documentation for Kerala- Flowering Plants, part 6: 32. 2004.

Top of the Page