ಐಸೊನಾಂಡ್ರ ಲ್ಯಾನ್ಸಿಯೋಲೇಟ Wt. - ಸಪೋಟೇಸಿ

:

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 5 ಮೀ ಎತ್ತರದವರೆಗಿನ ಸಣ್ಣ ಗಾತ್ರದ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿದ್ದು ಎಳೆಯದಾಗಿದ್ದಾಗ ನಸುಗೆಂಪಿನಿಂದ ಕೂಡಿದ ಹಳದಿ ಬಣ್ಣದ ಮೃದು ತುಪ್ಪಳದಿಂದ ಕೂಡಿದ್ದು ನಂತರ ರೋಮರಹಿತವಾಗುತ್ತವೆ.
ಜಿನುಗು ದ್ರವ : ಸಸ್ಯ ಕ್ಷೀರ ಹಾಲಿನ ಬಿಳಿ ಬಣ್ಣ ಹೊಂದಿದ್ದು ವಿಫುಲವಾಗಿರುತ್ತದೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟು 0.6 – 1.2 ಸೆಂ.ಮೀ.ವರೆಗಿನ ಉದ್ದವಿದ್ದು, ಕಾಲುವೆಗೆರೆಯನ್ನು ಹೊಂದಿದ್ದು ರೋಮರಹಿತವಾಗಿರುತ್ತದೆ; ಪತ್ರಗಳು 6 -18(-25) X 2 –4. 5 ಸೆಂ.ಮೀ. ಗಾತ್ರ, ಸಂಕುಚಿತ ಅಂಡವೃತ್ತ ಅಥವಾ ಅಂಡವೃತ್ತ – ಬುಗುರಿಭರ್ಜಿಯ ಆಕಾರ ಹೊಂದಿದ್ದು, ಮೊಂಡಾಗ್ರವುಳ್ಳ ಬರಬರುತ್ತಾ ಉದ್ದವಾಗಿ,ಕ್ರಮೇಣ ಚೂಪಾಗುವ ಮಾದರಿಯ ತುದಿ, ಬೆಣೆಯಾಕಾರದಿಂದ ಒಳಬಾಗಿದ ಮಾದರಿವರೆಗಿನ ಬುಡ, ತರಂಗಿತವಾದ ಅಂಚು,ಕಾಗದ ಅಥವಾ ಉಪತೊಗಲನ್ನೋಲುವ ಮೇಲ್ಮೈ ಹೊಂದಿರುತ್ತವೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಮೇಲೆದ್ದಿರುತ್ತದೆ; ಎರಡನೇ ದರ್ಜೆಯ ನಾಳಗಳು 8 – 13 ಜೋಡಿಗಳಿದ್ದು ಹೆಚ್ಚೂ ಕಡಿಮೆ ಸಮಾಂತರದಲ್ಲಿರುತ್ತವೆ;ಮೂರನೇ ದರ್ಜೆಯ ನಾಳಗಳು ಕಡಿಮೆ ಅಂತರ ಹೊಂದಿದ್ದು ಲಂಬರೇಖೆಗೆ ಸಮಕೋನದಲ್ಲಿದ್ದು ಎಲೆ ದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ / ಹೂಗಳು : ಹೂಗಳು ಕೆನೆ ಬಣ್ಣದಲ್ಲಿದ್ದು,ತೊಟ್ಟುರಹಿತವಾಗಿರುತ್ತವೆ ಮತ್ತು ಅಕ್ಷಾಕಂಕುಳಿನಲ್ಲಿನ ಗುಂಪುಗಳಲ್ಲಿರುತ್ತವೆ.
ಕಾಯಿ / ಬೀಜ : ಬೆರ್ರಿ ಕೆಂಪಾಗಿದ್ದು ಅಂಡವೃತ್ತದ ಆಕಾರ ಹೊಂದಿದ್ದು 0.7-1.5 ಸೆಂ.ಮೀ.ವರೆಗಿನ ಉದ್ದ ಹೊಂದಿರುತ್ತದೆ;ಬೀಜದ ಸಂಖ್ಯೆ 1.

ಜೀವಪರಿಸ್ಥಿತಿ :

1400 ಮೀ. ಎತ್ತರದ ಪ್ರದೇಶಗಳ ತೇವಾಂಶದಿಂದ ಕೂಡಿದ ನಿತ್ಯ ಹರಿದ್ವರ್ಣ ಕಾಡುಗಳ ಒಳಾವರಣದಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ದಕ್ಷಿಣ ಭಾರತ ಮತ್ತು ಶ್ರೀಲಂಕಾ;ಪಶ್ಚಿಮ ಘಟ್ಟದ ದಕ್ಷಿಣ ಮತ್ತು ಮಧ್ಯ ಸಹ್ಯಾದ್ರಿಯಲ್ಲಿ ಈ ಪ್ರಬೇಧ ವ್ಯಾಪಿಸಿದೆ.

ಗ್ರಂಥ ಸೂಚಿ :

Wight, Ic. t. 359. 1840; Gamble, Fl. Madras 2: 761. 1993 (re.ed.); Sasidharan, Biodiversity documentation for Kerala- Flowering Plants, part 6: 267. 2004; Saldanha, Fl. Karnataka 1: 328.1984.

Top of the Page