ಮೆಲಿಕೋಪೆ ಇಂಡಿಕ Wt. - ರೂಟೇಸಿ

:

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : ದೊಡ್ಡ ಗಾತ್ರದ ಪೊದೆಗಳಿಂದ 4 ಮೀ ಎತ್ತರದವರೆಗಿನ ಸಣ್ಣ ಗಾತ್ರದ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ಚತುಷ್ಕೋನದ ಆಕಾರ ಹೊಂದಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಏಕಪರ್ಣಿಕೆಗಳಾಗಿದ್ದು ಅಭಿಮುಖ ಹಾಗೂ ಕತ್ತರಿಯಾಕಾರದ ಮಾದರಿಯಲ್ಲಿ ಜೋಡನೆಗೊಂಡಿರುತ್ತವೆ ತೊಟ್ಟುಗಳು 0.7 ರಿಂದ 2 ಸೆಂ.ಮೀ.ಉದ್ದ ಹೊಂದಿದ್ದು ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರದಲ್ಲಿರುತ್ತವೆ ಮತ್ತು ರೋಮರಹಿತವಾಗಿರುತ್ತವೆ; ಪತ್ರಗಳು 5 -13 X 2.2 - 6 ಸೆಂ.ಮೀ ಗಾತ್ರ, ಅಂಡವೃತ್ತದಿಂದ ಅಂಡವೃತ್ತ-ಬುಗುರಿಯವರೆಗಿನ ಆಕಾರ, ಮೊಂಡಾಗ್ರವಳ್ಳ ಕಿರಿದಾದ ಕ್ರಮೇಣ ಚೂಪಾಗುವ ಅಥವಾ ಚೂಪಲ್ಲದ ತುದಿ,ಚೂಪಾದ ಬುಡ, ನಯವಾದ ಮತ್ತು ಹಿಂಸುರುಳಿಗೊಂಡ ಅಂಚು,ಮಚ್ಚೆ ರೀತಿಯ ರಸಗ್ರಂಥಿಗಳ ಸಮೇತವಿದ್ದು, ರೋಮರಹಿತವಾಗಿರುತ್ತವೆ;ಮಧ್ಯನಾಳ ಕಾಲುವೆಗೆರೆ ಸಮೇತವಿರುವುದರಿಂದ ಸ್ವಲ್ಪಮಟ್ಟಿಗೆ ಮೇಲೆದ್ದಿರುವ ಮಾದರಿಯಲ್ಲಿರುತ್ತದೆ;ಎರಡನೇ ದರ್ಜೆಯ ನಾಳಗಳು ಅಂದಾಜು 9 ಜೋಡಿಗಳಿದ್ದು ಅಂಚಿನ ಬಳಿ ಕುಣಿಕೆಗೊಂಡಿರುತ್ತವೆ; ಮೂರನೇ ದರ್ಜೆಯ ನಾಳಗಳ ಕವಲುಗಳು ಎಲೆಗಳ ಅಕ್ಷದ ಕಡೆಗಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಅಕ್ಷಾಕಂಕುಳಿನಲ್ಲಿನ ಮಧ್ಯಾರಂಭಿ ಮಾದರಿಯವುಗಳಾಗಿರುತ್ತವೆ; ತೊಟ್ಟು 0.4 ಸೆಂ.ಮೀ. ಉದ್ದವಿರುತ್ತದೆ.
ಕಾಯಿ / ಬೀಜ : ಸಂಪುಟ ಫಲಗಳು 4-ಕೋಶಗಳ ಸಮೇತವಿರುತ್ತವೆ;ಪ್ರತಿ ಕೋಶದಲ್ಲಿ ಒಂದು ಬೀಜವಿರುತ್ತದೆ.

ಜೀವಪರಿಸ್ಥಿತಿ :

1800 ಮತ್ತು 2400 ಮೀ. ನಡುವಿನ ಅತಿ ಎತ್ತರದ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳ ಒಳಾವರಣದಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ನೀಲಗಿರಿಯಲ್ಲಿ ಕಂಡು ಬರುತ್ತದೆ.

ಸ್ಥಿತಿ :

ಉಳಿವಿನ ಆತಂಕಕಾರಿ ಸ್ಥಿತಿ (IUCN,2000).

ಗ್ರಂಥ ಸೂಚಿ :

Wight, Ic. t. 1051. 1845; Gamble, Fl. Madras 1: 149. 1997 (re. ed); Sasidharan, Biodiversity documentation for Kerala- Flowering Plants, part 6: 81. 2004.

Top of the Page