English   Kannada   Tamil   
ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ
ಪ್ರಕೃತಿ : | 35 ಮೀ ಎತ್ತರದವರೆಗಿನ ದೊಡ್ಡ ಗಾತ್ರದ ಮರಗಳು. |
ಕಾಂಡ ಮತ್ತು ತೊಗಟೆ : | ತೊಗಟೆ ಕಡು ಬೂದು ಬಣ್ಣ ಹೊಂದಿದ್ದು,ಉದ್ದ ಸಾಲಿನಲ್ಲಿ ಸೀಳಿಕೆಗಳನ್ನೊಳ -ಗೊಂಡಿರುತ್ತದೆ,ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತದೆ;ಕಚ್ಚು ಮಾಡಿದ ಜಾಗ ನಸುಗೆಂಪು . |
ಕವಲುಗಳು ಮತ್ತು ಕಿರುಕೊಂಬೆಗಳು : | ಕಿರುಕೊಂಬೆಗಳು ದುಂಡಾಗಿದ್ದು ಎಳೆಯದಾಗಿದ್ದಾಗ ಸೂಕ್ಷ್ಮ ಮೃದು ತುಪ್ಪಳದಿಂದ ಕೂಡಿದ್ದು ನಂತರ ರೋಮರಹಿತವಾಗುತ್ತವೆ. |
ಜಿನುಗು ದ್ರವ : | ಸಸ್ಯ ಕ್ಷೀರ ಹಾಲಿನ ಬಿಳಿ ಬಣ್ಣ. |
ಎಲೆಗಳು : | ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ ;ತೊಟ್ಟು 1 – 2.5 ಸೆಂ.ಮೀ.ವರೆಗಿನ ಉದ್ದವಿದ್ದು,ಮೇಲ್ಭಾಗದ ದಿಟ್ಟಿನಲ್ಲಿ ಕಾಲುವೆಗೆರೆಯನ್ನು ಹೊಂದಿರುತ್ತವೆ, ಎಳೆಯದಾಗಿದ್ದಾಗ ಮೃದುತುಪ್ಪಳದಿಂದ ಕೂಡಿರುತ್ತದೆ, ನಂತರ ರೋಮರಹಿತವಾಗಿರುತ್ತದೆ;ಪತ್ರಗಳು 7 -14 X 2.5 –7 ಸೆಂ.ಮೀ. ಗಾತ್ರ,ಅಂಡವೃತ್ತ-ಚತುರಸ್ರದ ಆಕಾರ ಹೊಂದಿದ್ದು,ಮೊಂಡಾಗ್ರವುಳ್ಳ ಕಿರಿದಾಗಿ,ಕ್ರಮೇಣ ಚೂಪಾಗುವ ಮಾದರಿಯ ತುದಿ,ದುಂಡಾದ ಅಥವಾ ಚೂಪಾದ ಬುಡ,ಸ್ವಲ್ಪ ಮಟ್ಟಿಗೆ ತರಂಗಿತವಾದ ಅಂಚು, ತೊಗಲನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತ -ವಾಗಿರುತ್ತದೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಮೇಲೆದ್ದಿರುತ್ತದೆ; ಎರಡನೇ ದರ್ಜೆಯ ನಾಳಗಳು ಅಂದಾಜು18 ಜೋಡಿಗಳಿದ್ದು,ತೆಳುವಾಗಿರುತ್ತವೆ,ಅಂಚಿನ ಬಳಿ ಕುಣಿಕೆ -ಗೊಂಡಿರುತ್ತವೆ;ಮೂರನೇ ದರ್ಜೆಯ ನಾಳಗಳ ಕವಲುಗಳು ಎಲೆಯ ಅಕ್ಷದ ಕಡೆಗಿರುತ್ತವೆ. |
ಪುಷ್ಪಮಂಜರಿ / ಹೂಗಳು : | ಹೂಗಳು ಬಿಳಿ ಬಣ್ಣದಲ್ಲಿದ್ದು,ಅಕ್ಷಾಕಂಕುಳಿನಲ್ಲಿನ ಗುಚ್ಛಗಳಲ್ಲಿರುತ್ತವೆ; ತೊಟ್ಟು 2 ಸೆಂ.ಮೀ. ವರೆಗಿನ ಉದ್ದ ಹೊಂದಿರುತ್ತದೆ. |
ಕಾಯಿ / ಬೀಜ : | ಬೆರ್ರಿ ಅಂಡವೃತ್ತದ ಆಕಾರದಲ್ಲಿದ್ದು,ಕೆಂಪು ಮಿಶ್ರಿತ ಕಂದು ಬಣ್ಣದಲ್ಲಿರುತ್ತದೆ;ಬೀಜದ ಸಂಖ್ಯೆ 1. |