ನಿಯೋಲಿಟ್ಸಿಯ ಜೇಲಾನಿಕ (Nees) Merr. - ಲಾರೇಸಿ

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 20 ಮೀ.ವರೆವಿಗೆ ಬೆಳೆಯುವ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ತೆಳು ಕಂದು ಬಣ್ಣದಲ್ಲಿದ್ದು ವಾಯುವಿನಿಮಯ ಬೆಂಡು ರಂಧ್ರ ಸಮೇತ -ವಾಗಿರುತ್ತವೆ;ಕಚ್ಚು ಮಾಡಿದ ಕಿತ್ತಳೆ ಬಣ್ಣ ಹೊಂದಿರುತ್ತದೆ.
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು ಉಪ-ದುಂಡಾಗಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿ ಇದ್ದು ಕುಡಿಕೊಂಬೆಗಳ ತುದಿಯಲ್ಲಿ ಗುಂಪಾಗಿರುತ್ತವೆ;ತೊಟ್ಟುಗಳು 1.2 - 2 ಸೆಂ.ಮೀ. ಉದ್ದ ಹೊಂದಿದ್ದು ಅಡ್ಡಸೀಳಿದಾಗ ಸಪಾಟ ಪೀನ ಮಧ್ಯದ ಕಾರದಲ್ಲಿರುತ್ತವೆ ಮತ್ತು ರೋಮರಹಿತವಾಗಿರುತ್ತವೆ; ಪತ್ರಗಳು 7- 11 X3 – 3.5 ಸೆಂ.ಮೀ.ವರೆಗಿನ ಗಾತ್ರ ಹೊಂದಿದ್ದು ಅಂಡವೃತ್ತದಿಂದ ಸಂಕುಚಿತ ಅಂಡವೃತ್ತದ ಆಕಾರ ಹೊಂದಿರುತ್ತವೆ; ತುದಿ ಸಂಕುಚಿತ ಚೂಪಿನಿಂದ ಕ್ರಮೇಣ ಚೂಪಾಗುವ ಮಾದರಿಯಲ್ಲಿರುತ್ತದೆ; ಬುಡ ಒಳಬಾಗಿದ ರೀತಿಯಲ್ಲಿರುತ್ತದೆ;ಪತ್ರಗಳ ತಳಭಾಗ ಮಾಸಿದ ಬೂದು ಹಸಿರು ಬಣ್ಣ ಹೊಂದಿರುತ್ತದೆ; ಮೇಲ್ಮೈ ಉಪತೊಗಲನ್ನೋಲುವ ಮಾದರಿಯಲ್ಲಿರುತ್ತದೆ;ಮಧ್ಯನಾಳ ಪತ್ರದ ಬುಡದ ಸ್ವಲ್ಪ ಮೇಲೆ 3 ನಾಳಗಳು ಇದ್ದು ಅಂದಾಜು 4 ಎರಡನೇ ದರ್ಜೆಯ ನಾಳಗಳ ಸಮೇತವಿರುತ್ತವೆ; ಮೂರನೇ ದರ್ಜೆಯ ನಾಳಗಳು ಅಂತರ ಹೊಂದಿದ್ದು ಜಾಲಬಂಧ ನಾಳ ವಿನ್ಯಾಸದಲ್ಲಿದ್ದು ಎಲೆ ದಿಂಡಿಗೆ ಅಡ್ಡವಾಗಿ ಕೂಡುತ್ತವೆ;ಉನ್ನತ ದರ್ಜೆಯ ನಾಳಗಳು ಪತ್ರಗಳು ತೀರಾ ಸನಿಹವಾಗಿದ್ದು ಜಾಲಬಂಧ ನಾಳ ವಿನ್ಯಾಸ ಹೊಂದಿರುತ್ತವೆ.
ಪುಷ್ಪಮಂಜರಿ/ಹೂಗಳು : ಪುಷ್ಪಮಂಜರಿ ಪೀಠಛತ್ರ ಮಾದರಿಯಲ್ಲಿದ್ದು ಅಕ್ಷಾಕಂಕುಳಿನಲ್ಲಿರುವ ಅಥವಾ ಪಾರ್ಶ್ವದಲ್ಲಿನ ಗುಚ್ಛಗಳಲ್ಲಿರುತ್ತವೆ.
ಕಾಯಿ /ಬೀಜ : ಬೆರ್ರಿ ಅಂಡವೃತ್ತ – ಚತುರಸ್ರದ ಆಕಾರದಲ್ಲಿರುತ್ತದೆ; ಪುಷ್ಪಾವರಣ ಬಟ್ಟಲು ಅಲ್ಪವಾಗಿ ವೃದ್ಧಿಸಿರುತ್ತದೆನ ರೀತಿ ಇರುತ್ತದೆ;ಬೀಜ 1.

ಜೀವಪರಿಸ್ಥಿತಿ :

1800 ಮೀ. ಎತ್ತರದವರೆಗಿನ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳ ಒಳ ಛಾವಣಿಯಿಂದ ಉಪ-ಮೇಲ್ಛಾವಣಿವರೆಗೆ ಸಾಮಾನ್ಯವಾಗಿ ಈ ಪ್ರಭೇದ ಕಂಡುಬರುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಸಸ್ಯ ದಕ್ಷಿಣ ಮಧ್ಯ, ಮತ್ತು ದಕ್ಷಿಣ ಮಹಾರಾಷ್ಟ್ರದ ಸಹ್ಯಾದ್ರಿ ಪ್ರದೇಶಗಳಲ್ಲಿ ವ್ಯಾಪಿಸಿದೆ.

ಗ್ರಂಥ ಸೂಚಿ :

Gamble,Fl. Madras 1240.1925; Gamble, Fl. Madras 2:1239.1993(rep.ed.); Saldanha, Fl. Karnataka 1:71.1996

Top of the Page