ಆಕ್ಟೋಟ್ರೋಪಿಸ್ ಟ್ರವಂಕೊರಿಕ Bedd. - ರೂಬಿಯೇಸಿ

:

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : ದೊಡ್ಡ ಗಾತ್ರದ ಪೊದೆಗಳು ಅಥವಾ 5 ಮೀ. ಎತ್ತರದವರೆಗಿನ ಸಣ್ಣ ಗಾತ್ರದ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಬೂದು ಬಣ್ಣದಲ್ಲಿದ್ದು ಚಕ್ಕೆ ರೂಪದಲ್ಲಿರುತ್ತದೆ;ಕಚ್ಚು ಮಾಡಿದ ಜಾಗ ಕಂದು.
ಕವಲುಗಳು ಮತ್ತು ಕಿರುಕೊಂಬೆಗಳು : ಕವಲುಗಳು ಕಾಂಡದ ಲಂಬ ರೇಖೆಗೆ ಸಮಕೋನದಲ್ಲಿರುತ್ತವೆ ಮತ್ತು ದ್ವೈಧೀಕರಣಗೊಂಡಿರುತ್ತವೆ; ಕಿರುಕೊಂಬೆಗಳು ಕೋನಯುಕ್ತವಾಗಿದ್ದು,ಬಲಿತಾಗ ದುಂಡಾಗಿರುತ್ತವೆ, ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಕತ್ತರಿಯಾಕಾರದ ಅಭಿಮುಖ ಜೋಡನಾ ವ್ಯವಸ್ಥೆಯಲ್ಲಿರುತ್ತವೆ ; ಕಾವಿನೆಲೆಗಳು ಅಂಡಾಕಾರದಲ್ಲಿದ್ದು ತೊಟ್ಟುಗಳ ನಡುವೆ ಇರುತ್ತವೆ ಮತ್ತು ಉದುರಿದಾಗ ಗುರುತನ್ನು ಉಳಿಸುತ್ತವೆ;ತೊಟ್ಟು ಅಂದಾಜು 0.5 ಸೆಂ.ಮೀ.ವರೆಗಿನ ಉದ್ದವಿದ್ದು, ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರ ಹೊಂದಿದ್ದು, ರೋಮರಹಿತವಾಗಿರುತ್ತವೆ;ಪತ್ರಗಳು 8.5 -16 X 3-6 ಸೆಂ.ಮೀ. ಗಾತ್ರ ಹೊಂದಿದ್ದು ಅಂಡವೃತ್ತ-ಭರ್ಜಿಯ ಆಕಾರ ಹೊಂದಿದ್ದು,ಬಾಲರೂಪಿ-ಕ್ರಮೇಣ ಚೂಪಾಗುವ ತುದಿ, ಚೂಪಾದ ಬುಡ, ನಯವಾದ ಅಂಚು,ಕಾಗದವನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತವಾಗಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಉಬ್ಬಿರುತ್ತದೆ;ಎರಡನೇ ದರ್ಜೆಯ ನಾಳಗಳು ಅಂದಾಜು 8 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದವು.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ಅಕ್ಷಾಕಂಕುಳಿನಲ್ಲಿನ ಅಥವಾ ಮೇಲಿನ ಕಕ್ಷಸ್ಥ ಸ್ಥಾನದಲ್ಲಿನ ವೃಂತ ಸಮೇತವಾದ ನೀಳಛತ್ರ ಮಾದರಿಯವು;ಹೂಗಳು ಬಿಳಿ ಬಣ್ಣದಲ್ಲಿರುತ್ತವೆ;ತೊಟ್ಟು ತೆಳುವಾಗಿದ್ದು 0.3 ಸೆಂ.ಮೀ. ಉದ್ದವಿರುತ್ತವೆ.
ಕಾಯಿ / ಬೀಜ : ಫಲಗಳು ಬೆರ್ರಿ ಮಾದರಿಯವು;ಬೀಜಗಳ ಸಂಖ್ಯೆ 1.

ಜೀವಪರಿಸ್ಥಿತಿ :

900 ಮತ್ತು 1500 ಮೀ. ನಡುವಿನ ಎತ್ತರದ ಪ್ರದೇಶಗಳತೇವಾಂಶದಿಂದ ಕೂಡಿದ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ನೈರುತ್ಯ ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ಅಗಸ್ತ್ಯಮಲೈ ಮತ್ತು ಪೆರಿಯಾರ್ ಪ್ರದೇಶಗಳಲ್ಲಿ ವ್ಯಾಪಿಸಿದೆ.

ಸ್ಥಿತಿ :

ಅಪರೂಪ (IUCN, 2000).

ಗ್ರಂಥ ಸೂಚಿ :

Fl. Sylv. t. 327. 1873; Gamble, Fl. Madras 2: 627. 1993 (re. ed);Sasidharan, Biodiversity documentation for Kerala- Flowering Plants, part 6: 226. 2004.

Top of the Page