ಫೋಬೆ ವೈಟಿಯೈ Meisner - ಲಾರೇಸಿ

Synonym : ಫೋಬೆ ಪ್ಯಾನಿಕ್ಯುಲೇಟ J.Hk.;non Nees

English   Kannada   Malayalam   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 15 ಮೀ.ವರೆವಿಗೆ ಬೆಳೆಯುವ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿದ್ದು ವಾಯುವಿನಿಮಯ ಬೆಂಡು ರಂಧ್ರ ಸಮೇತವಿರುತ್ತವೆ ಹಾಗೂ ನಸುಗೆಂಪಿನಿಂದ ಕೂಡಿದ, ಸಮೃದ್ಧವಾದ ದಟ್ಟ ಮೃದುತುಪ್ಪಳದಿಂದ ಕೂಡಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 1 - 2 ಸೆಂ.ಮೀ. ಉದ್ದ ಹೊಂದಿದ್ದು ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರದಲ್ಲಿರುತ್ತವೆ;ಪತ್ರಗಳು 6.5-11.5 X 3.4-9 ಸೆಂ.ಮೀ.ವರೆಗಿನ ಗಾತ್ರ ಹೊಂದಿದ್ದು ಸಾಮಾನ್ಯವಾಗಿ ಬುಗುರಿ ಅಥವಾ ಕೆಲವು ವೇಳೆ ಅಂಡವೃತ್ತ --ಬುಗುರಿ-ಭರ್ಜಿಯ ಆಕಾರ ಹೊಂದಿರುತ್ತವೆ;ಪತ್ರಗಳು ಕ್ರಮೇಣ ಚೂಪಾಗುವ ತುದಿ ಮತ್ತು ಬೆಣೆಯಾಕಾರದ ಎಲೆಯ ಬುಡವನ್ನು ಹೊಂದಿರುತ್ತವೆ ;ಪತ್ರದ ತಳ ಭಾಗ ಕನಿಷ್ಟ ಪಕ್ಷ ಎಳೆಯದಾಗಿರುವಾಗಲಾದರೂ ದಟ್ಟವಾದ ಮೃದು ತುಪ್ಪಳವನ್ನು ಹೊಂದಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಸ್ವಲ್ಪ ಉಬ್ಬಿರುತ್ತದೆ; ಎರಡನೇ ದರ್ಜೆಯ ನಾಳಗಳು ಅಂದಾಜು 6 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳು ಅಂತರ ಹೊಂದಿದ್ದು ಎಲೆ ದಿಂಡಿಗೆ ಅಡ್ಡವಾಗಿ ಕೂಡುತ್ತವೆ ಮತ್ತು ದೃಢವಾಗಿರುತ್ತವೆ.
ಪುಷ್ಪಮಂಜರಿ/ಹೂಗಳು : ಪುಷ್ಪಮಂಜರಿ ಅಕ್ಷಾಕಂಕುಳಿನಲ್ಲಿರುವ ತೆಳುವಾಗಿರುವ ಪುನರಾವೃತ್ತಿಯಾಗಿ ಕವಲೊಡೆಯುವ ಮಾದರಿಯಲ್ಲಿರುತ್ತವೆ ಮತ್ತು ದಟ್ಟವಾದ ಮೃದು ತುಪ್ಪಳದಿಂದ ಕೂಡಿರುತ್ತದೆ.
ಕಾಯಿ /ಬೀಜ : ಬೆರ್ರಿ ಗೋಳಾಕಾರದಲ್ಲಿದ್ದು 1 ಸೆಂ.ಮೀ.ಅಡ್ಡಗಳತೆ ಹೊಂದಿರುತ್ತದೆ;ಬೀಜ 1.

ಜೀವಪರಿಸ್ಥಿತಿ :

1400 ಮತ್ತು 2300 ಮೀ. ನಡುವಿನ ಉನ್ನತ ಎತ್ತರದ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳ ಮೇಲ್ಛಾವಣಿಯಲ್ಲಿ ಈ ಪ್ರಭೇದ ಕಂಡುಬರುತ್ತದೆ.

ವ್ಯಾಪನೆ :

ಭಾರತ ಮತ್ತು ಮ್ಯಾನ್ಮಾರ್; ಪಶ್ಚಿಮ ಘಟ್ಟದಲ್ಲಿ ಈ ಸಸ್ಯ ದಕ್ಷಿಣ ಮತ್ತು ಮಧ್ಯ ಸಹ್ಯಾದ್ರಿ ಪ್ರದೇಶಗಳಲ್ಲಿ ವ್ಯಾಪಿಸಿದೆ.

ಗ್ರಂಥ ಸೂಚಿ :

DC., Prodr. 15:38.1864;Gamble, Fl. Madras 2:1228.1993 (rep.ed.) Sasidharan, Biodiversity documentation for Kerala Flowering Plants, part 6: 401. 2004; Saldanha, Fl.Karnataka 1:72.1984..

Top of the Page