ರಿನೋರಿಯ ಬೆಂಗಾಲೆನ್ಸಿಸ್ (Wall.) O.Ktze. - ವಯೊಲೇಸಿ

Synonym : ಅಲ್ಸೋಡಿಯ ಬೆಂಗಾಲೆನ್ಸಿಸ್ Wall.; ಅಲ್ಸೋಡಿಯ ಝೇಲಾನಿಕ (Arn.)Thw.

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 7 ಮೀ. ಎತ್ತರದ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ನಯವಾಗಿರುತ್ತದೆ;ಕಚ್ಚು ಮಾಡಿದ ಜಾಗ ಹಳದಿ .
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು –ಕೋನಯುಕ್ತವಾಗಿರುವ ಮಾದರಿಯಿಂದ ದುಂಡಾಗಿರುವ ರೀತಿಯಲ್ಲಿರುತ್ತವೆ, ಸೂಕ್ಷ್ಮವಾದ ಮೃದುತುಪ್ಪಳದಿಂದ ಕೂಡಿದ್ದು, ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು, ಪರ್ಯಾಯ ಜೋಡನಾ ವ್ಯವಸ್ಥೆಯಲ್ಲಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಲಂಬ ಸಾಲಿನಲ್ಲಿರುತ್ತವೆ ;ಕಾವಿನೆಲೆಗಳು ಪಾರ್ಶ್ವದಲ್ಲಿದ್ದು,ಭರ್ಜಿಯ ಆಕಾರದಲ್ಲಿದ್ದು,ಮೃದುತುಪ್ಪಳದಿಂದ ಕೂಡಿರುತ್ತವೆ,ಉದುರಿ ಹೋದ ನಂತರ ಗುರುತುಗಳನ್ನು ಉಳಿಸುತ್ತವೆ;ತೊಟ್ಟುಗಳು 0.7 – 1.5 ಸೆಂ.ಮೀ. ಉದ್ದವಿದ್ದು ಕಾಲುವೆಗೆರೆ ಸಮೇತವಿದ್ದು ರೋಮರಹಿತವಾಗಿರುತ್ತವೆ;ಪತ್ರಗಳು 9 – 19 X 3.5 – 6.7 ಸೆಂ.ಮೀ. ಗಾತ್ರ ಹೊಂದಿದ್ದು ಸಂಕುಚಿತ ಅಂಡವೃತ್ತದಿಂದ ಅಂಡವೃತ್ತ-ಚತುರಸ್ರದವರೆಗಿನ ಆಕಾರ ಹೊಂದಿದ್ದು, ಅಗ್ರದಲ್ಲಿ ಮೊನಚು ಮುಳ್ಳನ್ನು ಹೊಂದಿರುವ ಕ್ರಮೇಣ ಚೂಪಾಗುವ ತುದಿ, ಚೂಪಾದ ಬುಡ, ದುಂಡೇಣು – ಗರಗಸ ದಂತಿತವಾದ ಅಂಚು, ತೊಗಲ್ಲನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತವಾಗಿರುತ್ತವೆ;ಮಧ್ಯನಾಳ ಮೇಲ್ಭಾಗದಲ್ಲಿ ಮೇಲೆದ್ದಿರುತ್ತದೆ;ಎರಡನೇ ದರ್ಜೆಯ ನಾಳಗಳು 6 ರಿಂದ 10 ಜೋಡಿಗಳಿದ್ದು, ಅಕ್ಷಾಕಂಕುಳಿನಲ್ಲಿ ಸಹಜೀವಿ ಗೂಡುಗಳನ್ನು ಹೊಂದಿರುತ್ತವೆ; ಮೂರನೇ ದರ್ಜೆಯ ನಾಳಗಳು ಸನಿಹವಾಗಿದ್ದು ಲಂಬರೇಖೆಗೆ ಸಮಕೋನದಲ್ಲಿದ್ದು,ಜಾಲಬಂಧ ನಾಳ ವಿನ್ಯಾಸದಲ್ಲಿದ್ದು ಎಲೆಯ ದಿಂಡಿಗೆ ಅಡ್ಡವಾಗಿ ಕೂಡುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿ ಅಕ್ಷಾಕಂಕುಳಿನಲ್ಲಿನ ಗುಚ್ಛಗಳು;ಹೂಗಳು ಬಿಳಿ ಬಣ್ಣದಲ್ಲಿದ್ದು ತೊಟ್ಟುರಹಿತ ವಾಗಿರುತ್ತವೆ.
ಕಾಯಿ / ಬೀಜ : ಸಂಪುಟ ಫಲಗಳು ನಯವಾಗಿದ್ದು, 3-ಕೋಶಗಳನ್ನೊಳಗೊಂಡಿರುತ್ತವೆ;ಬೀಜಗಳ ಸಂಖ್ಯೆ 3.

ಜೀವಪರಿಸ್ಥಿತಿ :

800 ಮೀ. ಎತ್ತರದ ಪ್ರದೇಶಗಳಲ್ಲಿನ ತೇವಾಂಶದಿಂದ ಕೂಡಿದ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಸಸ್ಯ ಬೆಳೆಯುತ್ತದೆ.

ವ್ಯಾಪನೆ :

ಇಂಡೋಮಲೇಸಿಯ , ಆಸ್ಟ್ರೇಲಿಯ ಮತ್ತು ಫೆಸಿಫಿಕ್ ದ್ವೀಪಗಳು; ಪಶ್ಚಿಮ ಘಟ್ಟದ ದಕ್ಷಿಣ ಮತ್ತು ಮಧ್ಯ (ಕೊಡಗು ಮತ್ತು ಚಿಕ್ಕಮಗಳೂರು ಪ್ರದೇಶಗಳು) ಸಹ್ಯಾದ್ರಿ ಪ್ರದೇಶಗಳಲ್ಲಿ ಈ ಪ್ರಭೇದ ಕಂಡುಬರುತ್ತದೆ.

ಗ್ರಂಥ ಸೂಚಿ :

O.Ktze., Rev. Gen. Pl. 1: 42. 1891; Gamble, Fl. Madras 1: 49. 1997 (re. ed); Sasidharan, Biodiversity documentation for Kerala- Flowering Plants, part 6: 30. 2004.

Top of the Page