ಸಿಂಪ್ಲೊಕಾಸ್ ಫೋಲಿಯೋಸ Wt. - ಸಿಂಪ್ಲೊಕೇಸಿ

:

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 8 ಮೀ. ಎತ್ತರದವರೆಗಿನಸಣ್ಣ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ದುಂಡಾಗಿದ್ದು ಒರಟು ರೋಮಗಳಿಂದ ಕೂಡಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 0.5 –-1.5 ಸೆಂ.ಮೀ. ಉದ್ದವಿದ್ದು, ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರ ಹೊಂದಿರುತ್ತವೆ,ಎಳೆಯದಾಗಿದ್ದಾಗ ಒರಟು ರೋಮಗಳಿಂದ ಕೂಡಿರುತ್ತವೆ; ಪತ್ರಗಳು5.5– 10 X 2 .5–5 ಸೆಂ.ಮೀ. ಗಾತ್ರ, ಅಂಡವೃತ್ತ-ಬುಗುರಿ ಅಥವಾ ಬುಗುರಿ ಭರ್ಜಿಯ ಆಕಾರ ಹೊಂದಿದ್ದು,ದುಂಡಾದ ಅಥವಾ ಕಿರಿದಾಗಿ ಕ್ರಮೇಣ ಚೂಪಾಗುವ ಮಾದರಿಯ ತುದಿ, ಬೆಣೆ - ಒಳಬಾಗಿದ ಮಾದರಿಯ ಅಥವಾ ದುಂಡಾದ ಬುಡ ಹೊಂದಿದ್ದು ,ಅಂಚು ಗರಗಸ ದಂತಿತವಾಗಿರುತ್ತದೆ ಮತ್ತು ಸ್ವಲ್ಪಮಟ್ಟಿಗೆ ತರಂಗಿತವಾಗಿರುತ್ತದೆ ಪತ್ರಗಳ ಮೇಲ್ಮೈ ತೊಗಲನ್ನೋಲುವ ಮಾದರಿಯಲ್ಲಿದ್ದು ರೋಮರಹಿತವಾಗಿರುತ್ತವೆ ಅಥವಾಪತ್ರದ ತಳಭಾಗದ ಮಧ್ಯನಾಳದ ಮೇಲಾದರೂ ವಿರಳವಾದ ಒರಟು ರೋಮಗಳಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತದೆ;ಎರಡನೇ ದರ್ಜೆಯ ನಾಳಗಳು 8 – 14 ಜೋಡಿಗಳಿದ್ದು ಅಂಚಿನ ಬಳಿ ಕುಣಿಕೆಗೊಂಡಿರುತ್ತವೆ;ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿ ಕದಿರು ಮಂಜರಿ ಮಾದರಿಯವು;ಹೂಗಳು ಬಿಳಿ ಬಣ್ಣ ಹೊಂದಿದ್ದು ತೊಟ್ಟುರಹಿತವಾಗಿರುತ್ತವೆ.
ಕಾಯಿ / ಬೀಜ : ಡ್ರೂಪ್ಗಳು ಅಂಡದ ಆಕಾರದಲ್ಲಿರುತ್ತವೆ.

ಜೀವಪರಿಸ್ಥಿತಿ :

800 ಮತ್ತು 1400 ಮೀ. ನಡುವಿನ ಮಧ್ಯಮ ಎತ್ತರದವರೆಗಿನ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ನೀಲಗಿರಿ ಮತ್ತು ಪಳನಿ ಬೆಟ್ಟಗಳಲ್ಲಿ ಆಗಾಗ್ಗೆಯೂ, ಅಗಸ್ತ್ಯಮಲೈ,ವರುಶನಾಡು ಬೆಟ್ಟಗಳು ಮತ್ತು ಕಾರ್ಡಮೊಮ್ ಬೆಟ್ಟಗಳಲ್ಲಿ ಆಗೊಮ್ಮೆ ಈಗೊಮ್ಮೆ ಕಂಡುಬರುತ್ತದೆ.

ಗ್ರಂಥ ಸೂಚಿ :

Wight, Ic. t. 1234. 1848; Gamble, Fl. Madras 2: 783. 1993 (re.ed.); Sasidharan, Biodiversity documentation for Kerala- Flowering Plants, part 6: 273. 2004.

Top of the Page