ಸಿಂಪ್ಲೊಕಾಸ್ ಒಬ್ಟ್ಯೂಸ Wall. ex G. Don - ಸಿಂಪ್ಲೊಕೇಸಿ

:

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 8 ಮೀ.ಎತ್ತರದವರೆಗಿನ ಸಣ್ಣ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಕೋನಯುಕ್ತದಿಂದ ಉಪದುಂಡಾಗಿರುವರೆಗಿನ ಆಕಾರದಲ್ಲಿದ್ದು ರೋಮರಹಿತವಾಗಿರುತ್ತವೆ
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 1-2 ಸೆಂ.ಮೀ.ವರೆಗಿನ ಉದ್ದವಿದ್ದು,ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರದಲ್ಲಿದ್ದು, ರೋಮರಹಿತವಾಗಿರುತ್ತವೆ; ಪತ್ರಗಳು 5 – 12.5 X 2 – 5 ಸೆಂ.ಮೀ. ಗಾತ್ರ, ಅಂಡವೃತ್ತದಿಂದ ಬುಗುರಿವರೆಗಿನ ಆಕಾರ ಹೊಂದಿದ್ದು, ಚೂಪಲ್ಲದ ಮಾದರಿಯ ತುದಿ, ಒಳಬಾಗಿದ ಬುಡ ,ಗರಗಸ ದಂತಿತವಾದ ಮತ್ತು ಸ್ವಲ್ಪಮಟ್ಟಿಗೆ ಹಿಂಸುರುಳಿಗೊಂಡ ಅಂಚು ಹೊಂದಿದ್ದು ರೋಮರಹಿತವಾಗಿರುತ್ತವೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತದೆ;ಎರಡನೇ ದರ್ಜೆಯ ನಾಳಗಳು 5-10 ಜೋಡಿಗಳಿದ್ದು ಅಂಚಿನ ಬಳಿ ಕುಣಿಕೆಗೊಂಡಿರುತ್ತವೆ;ಮೂರನೇ ದರ್ಜೆಯ ನಾಳಗಳು ಅಂತರ ಹೊಂದಿದ್ದು ಓರೆಯಾಗಿ, ಎಲೆಯ ದಿಂಡಿಗೆ ಅಡ್ಡವಾಗಿ ಕೂಡುವ ಮಾದರಿಯಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿ ಅಕ್ಷಾಕಂಕುಳಿನಲ್ಲಿನಲ್ಲಿನ ಮಧ್ಯಾಭಿಸರ ಮಾದರಿಯವುಗಳಾಗಿದ್ದು 2 – 15 ಸೆಂ.ಮೀ. ಉದ್ದವಿರುತ್ತವೆ. ಹೂ ತೊಟ್ಟುಗಳು 0.4 ಸೆಂ.ಮೀ.ವರೆಗಿನ ಉದ್ದವಿರುತ್ತವೆ.
ಕಾಯಿ / ಬೀಜ : ಡ್ರೂಪ್ಗಳು ಅಂಡವೃತ್ತದ ಆಕಾರದಲ್ಲಿದ್ದು 1.6 ಸೆಂ.ಮೀ. ಉದ್ದವಿರುತ್ತವೆ.

ಜೀವಪರಿಸ್ಥಿತಿ :

1800 ಮತ್ತು 2400 ಮೀ. ನಡುವಿನ ಅತಿಎತ್ತರದವರೆಗಿನ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ದಕ್ಷಿಣ ಭಾರತ ಮತ್ತು ಶ್ರೀಲಂಕಾ;ಪಶ್ಚಿಮ ಘಟ್ಟದಲ್ಲಿ ನೀಲಗಿರಿ ಮತ್ತು ಅಣ್ಣಾಮಲೈ ಪ್ರದೇಶಗಳಲ್ಲಿ ಈ ಪ್ರಭೇದ ವ್ಯಾಪಿಸಿದೆ.

ಗ್ರಂಥ ಸೂಚಿ :

Gen. Hist. 4: 3. 1837-1838; Gamble, Fl. Madras 2: 783. 1993 (re.ed.); Sasidharan, Biodiversity documentation for Kerala- Flowering Plants, part 6: 274. 2004; Nooteb., Rev. Symplocac. 244. 1975

Top of the Page