ಸಿಂಪ್ಲೊಕಾಸ್ ಪೆಂಡ್ಯುಲ Wt. - ಸಿಂಪ್ಲೊಕೇಸಿ

Synonym : ಸಿಂಪ್ಲೊಕಾಸ್ ಸೆಸ್ಸೈಲಿಸ್ Cl.

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 10 ಮೀ.ಎತ್ತರದವರೆಗಿನ ಸಣ್ಣ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು ಉಪದುಂಡಾಗಿದ್ದು ರೋಮರಹಿತವಾಗಿರುತ್ತವೆ
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 1-1.5 ಸೆಂ.ಮೀ.ವರೆಗಿನ ಉದ್ದವಿದ್ದು,ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾರದಲ್ಲಿದ್ದು, ರೋಮರಹಿತವಾಗಿರುತ್ತವೆ; ಪತ್ರಗಳು 5.5 – 9.5 X 2.5 – 4 ಸೆಂ.ಮೀ. ಗಾತ್ರ, ಅಂಡವೃತ್ತದಿಂದ ಬುಗುರಿವರೆಗಿನ ಆಕಾರ ಹೊಂದಿದ್ದು, ಚೂಪಾದ ತುದಿ, ಬೆಣೆಯಾಕಾರದ ಬುಡ, ಗರಗಸ ದಂತಿತವಾದ ಅಂಚು ಹೊಂದಿದ್ದು ರೋಮರಹಿತವಾಗಿರುತ್ತವೆ;ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತದೆ;ಎರಡನೇ ದರ್ಜೆಯ ನಾಳಗಳು ಅಂದಾಜು 8 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ವಿಶಾಲ ಜಾಲಬಂಧ ನಾಳ ವಿನ್ಯಾಸದಲ್ಲಿರುತ್ತವೆ.
ಪುಷ್ಪಮಂಜರಿ / ಹೂಗಳು : ಹೂಗಳು ಒಂಟಿಯಾಗಿ ಅಥವಾ 3 ಒಟ್ಟಿಗಿರುತ್ತವೆ,ವೃಂತದ ಸಮೇತವಿದ್ದು ಅಕ್ಷಾಕಂಕುಳಿನಲ್ಲಿ ಅಥವಾ ಪಾರ್ಶ್ವದಲ್ಲಿ ಇದ್ದು ಲೋಲಾಡುತಿರುತ್ತವೆ;ಹೂತೊಟ್ಟುಗಳು ಅಂದಾಜು 0.2 ಸೆಂ.ಮೀ.ವರೆಗಿನ ಉದ್ದವಿರುತ್ತವೆ.
ಕಾಯಿ / ಬೀಜ : ಡ್ರೂಪ್ಗಳು ಕದಿರಣಿಗೆ ಆಕಾರದಲ್ಲಿದ್ದು 1.5 ಸೆಂ.ಮೀ. ಉದ್ದವಿರುತ್ತವೆ.

ಜೀವಪರಿಸ್ಥಿತಿ :

1500 ಮತ್ತು 2200 ಮೀ. ನಡುವಿನ ಅತಿಎತ್ತರದವರೆಗಿನ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಇಂಡೋಮಲೇಸಿಯ ;ಪಶ್ಚಿಮ ಘಟ್ಟದ ದಕ್ಷಿಣ ಸಹ್ಯಾದ್ರಿ ಪ್ರದೇಶದಲ್ಲಿ ಈ ಪ್ರಭೇದ ವ್ಯಾಪಿಸಿದೆ.

ಗ್ರಂಥ ಸೂಚಿ :

Wight, Ic. t. 1237. 1848; Gamble, Fl. Madras 2: 784. 1993 (re.ed.); Sasidharan, Biodiversity documentation for Kerala- Flowering Plants, part 6: 274. 2004.

Top of the Page