ಸೈಝೀಸಿಯಂ ಕ್ಯಾಲೋಫಿಲ್ಲಿಫೋಲಿಯ Walp. - ಮಿರ್ಟೇಸಿ

ಪರ್ಯಾಯ ನಾಮ : ಯೂಜೀನಿಯ ಕ್ಯಾಲೋಫಿಲ್ಲಿಫೋಲಿಯ(Walp.) Wt.

Vernacular names : Tamil: ನ್ಯಾರ,ನೀರೋಡಂ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 20 ಮೀ. ಎತ್ತರದವರೆಗಿನ ಮರಗಳು.
ಕಾಂಡ ಮತ್ತು ತೊಗಟೆ : ತೊಗಟೆ ಕಂದು ಬಣ್ಣ ಹೊಂದಿದ್ದು ನಯವಾಗಿರುತ್ತದೆ;ಕಚ್ಚು ಮಾಡಿದ ಜಾಗ ಕಂದು ಬಣ್ಣದಲ್ಲಿರುತ್ತದೆ
ಕವಲುಗಳು ಮತ್ತು ಕಿರುಕೊಂಬೆಗಳು : ಎಳೆಯ ಕಿರುಕೊಂಬೆಗಳು 4 ಕೋನಗಳನ್ನು ಹೊಂದಿದ್ದು ರೋಮರಹಿತವಾಗಿರುತ್ತವೆ.
ಎಲೆಗಳು : ಎಲೆಗಳು ಸರಳವಾಗಿದ್ದು ಅಭಿಮುಖವಾಗಿ ಜೋಡನೆಗೊಂಡಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಲಂಬ ಸಾಲಿನಲ್ಲಿರುತ್ತವೆ; ತೊಟ್ಟುಗಳು 0.2 – 0.3 ಸೆಂ.ಮೀ. ಉದ್ದವಿದ್ದು ಕಾಲುವೆಗೆರೆ ಸಮೇತವಿರುತ್ತವೆ ಮತ್ತುರೋಮರಹಿತವಾಗಿರುತ್ತವೆ;ಪತ್ರಗಳು 2.5 –3.5 X1.5 – 3 ಸೆಂ.ಮೀ.ವರೆಗಿನ ಗಾತ್ರವಿದ್ದು ಬುಗುರಿ ಅಥವಾ ಉಪ ಬುಗುರಿಯ ಆಕಾರ ಹೊಂದಿದ್ದು, ಮೊಂಡಾಗ್ರವುಳ್ಳ ಸಣ್ಣದಾದ, ಬಾಲರೂಪಿ -ಕ್ರಮೇಣ ಚೂಪಾಗುವ ಕೆಲವು ವೇಳೆ ಚೂಪಲ್ಲದ ತುದಿ,ಚೂಪಾದ ಬುಡ,ನಯವಾದ ಅಂಚು,ಪ್ರಕಾಶ ಭೇಧ್ಯ ರಸಗ್ರಂಥಿ ಚುಕ್ಕೆಗಳನ್ನು ಹೊಂದಿದ್ದು ತೊಗಲನ್ನೋಲುವ ಮೇಲ್ಮೈ ಹೊಂದಿರುತ್ತವೆ ಮತ್ತು ರೋಮರಹಿತವಾಗಿರುತ್ತವೆ;ಮಧ್ಯ ನಾಳ ಪತ್ರದ ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತದೆ; ಅಂಚಿನ ನಾಳಗಳು ಇರುತ್ತವೆ; ಎರಡನೇ ದರ್ಜೆಯ ನಾಳಗಳು ಅನೇಕವಿದ್ದು ಸಮಾಂತರದಲ್ಲಿರುತ್ತವೆ;ಮೂರನೇ ದರ್ಜೆಯ ನಾಳಗಳು ಎಲೆಯ ಅಕ್ಷದ ಕಡೆಗೆ ಕವಲುಗೊಂಡಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿ ತುದಿಯಲ್ಲಿನ, ಅಕ್ಷಾಕಂಕುಳಿನಲ್ಲಿನ ಅಥವಾ ಪಾರ್ಶ್ವದಲ್ಲಿನ ನೀಳ ಛತ್ರ ಮಾದರಿಯಲ್ಲಿರುತ್ತವೆ;ಹೂಗಳು ಬಿಳಿ ಬಣ್ಣದಲ್ಲಿರುತ್ತವೆ.
ಕಾಯಿ / ಬೀಜ : ಬೆರ್ರಿಗಳು ಚತುರಸ್ರ ಅಥವಾ ಬುಗುರಿಯ ಆಕಾರದಲ್ಲಿದ್ದು ಕಡು ಕೆನ್ನೀಲಿ ಬಣ್ಣದವುಗಳಾಗಿರುತ್ತವೆ.

ಜೀವಪರಿಸ್ಥಿತಿ :

1800 ಮತ್ತು 2200 ನಡುವಿನ ಅತಿ ಎತ್ತರ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳ ಮೇಲ್ಛಾವಣಿ ಮರಗಳಾಗಿ ಈ ಪ್ರಭೇದ ಕಂಡು ಬರುತ್ತದೆ.

ವ್ಯಾಪನೆ :

ಪಶ್ಚಿಮ ಘಟ್ಟ ಮತ್ತು ಶ್ರೀಲಂಕಾ;ಪಶ್ಚಿಮ ಘಟ್ಟದಲ್ಲಿ ಈ ಪ್ರಭೇದ ಅಗಸ್ತ್ಯಮಲೈ ಬೆಟ್ಟಗಳು, ನೀಲಗಿರಿ ಪಾಲಕ್ಕಾಡು ಬೆಟ್ಟ ಫ್ರದೇಶಗಳಲ್ಲಿ ಈ ಸಸ್ಯ ವ್ಯಾಪಿಸಿದೆ.

ಗ್ರಂಥ ಸೂಚಿ :

Rep. 2:180.1843 Gamble, Fl. Madras 1:485.1997(rep.ed.); Sasidharan, Biodiversity documentation for Kerala- Flowering Plants, part 6:176.2004.

Top of the Page