ಸೈಝೀಸಿಯಂ ಪರಮೇಸ್ವರಾನಿಯೈ Mohanan & Henry - ಮಿರ್ಟೇಸಿ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಸ್ಥಿತಿ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 8 ಮೀ. ಎತ್ತರದವರೆಗೆ ಬೆಳೆಯುವ ಮರಗಳು.
ಕವಲುಗಳು ಮತ್ತು ಕಿರುಕೊಂಬೆಗಳು : ಕಿರುಕೊಂಬೆಗಳು 4-ಕೋನಯುಕ್ತವಾಗಿದ್ದು ರೋಮರಹಿತವಾಗಿರುತ್ತದೆ.
ಎಲೆಗಳು : ಎಲೆಗಳು ಸರಳವಾಗಿದ್ದು ಅಭಿಮುಖವಾಗಿ ಜೋಡನೆಗೊಂಡಿದ್ದು ಕಾಂಡದ ಎರಡೂ ಕಡೆ ಎದುರು ಬದರಿನ ಲಂಬ ಸಾಲಿನಲ್ಲಿರುತ್ತವೆ;ತೊಟ್ಟುಗಳು 0.2 ಸೆಂ.ಮೀ. ಉದ್ದಹೊಂದಿದ್ದು ರೋಮರಹಿತವಾಗಿರುತ್ತವೆ;ಪತ್ರಗಳು 2.8-5 X1.8-2.7 ಸೆಂ.ಮೀ.ವರೆಗಿನ ಗಾತ್ರವಿದ್ದು ಅಂಡವೃತ್ತದಿಂದ ಅಂಡ-ಅಂಡವೃತ್ತದ ಆಕಾರ,ಚೂಪಾದ ಅಥವಾ ಚೂಪಲ್ಲದ ತುದಿ, ದುಂಡಾದ ಅಥವಾ ಚೂಪಲ್ಲದ ಬುಡ,ನಯವಾದ ಅಥವಾ ಹಿಂಸುಳಿಗೊಂಡ ಅಂಚು, ತೊಗಲನ್ನೋಲುವ ಮೇಲ್ಮೈ ಹೊಂದಿದ್ದು ರೋಮರಹಿತವಾಗಿರುತ್ತವೆ ಮತ್ತು ಪ್ರಕಾಶ ಭೇಧ್ಯ ರಸಗ್ರಂಥಿ ಚುಕ್ಕೆಗಳ ಸಮೇತವಿರುತ್ತವೆ; ಮಧ್ಯ ನಾಳ ಮೇಲ್ಭಾಗದಲ್ಲಿ ಕಾಲುವೆಗೆರೆಯ ಸಮೇತವಿರುತ್ತದೆ;ಅಂತರ ಅಂಚಿನ ನಾಳಗಳು ಇರುತ್ತವೆ;ಎರಡನೇ ದರ್ಜೆಯ ನಾಳಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು,ಅಂತರ ನಾಳ ಸಮೇತವಿದ್ದು,ಸಮಾಂತರದಲ್ಲಿದ್ದು ತೆಳುವಾಗಿರುತ್ತವೆ;ಮೂರನೇ ದರ್ಜೆಯ ನಾಳಗಳ ಕವಲುಗಳು ಎಲೆಯ ಅಕ್ಷದ ಕಡೆಗಿರುತ್ತವೆ ಅಥವಾ ಅಸ್ಪಷ್ಟವಾಗಿರುತ್ತವೆ.
ಪುಷ್ಪಮಂಜರಿ / ಹೂಗಳು : ಪುಷ್ಪಮಂಜರಿಗಳು ದಟ್ಟವಾಗಿದ್ದು ತುದಿಯಲ್ಲಿನ ಪೀಠಛತ್ರ ಮಧ್ಯಾರಂಭಿ ಮಾದರಿಯವು;ಹೂಗಳು ಹಸಿರು ಮಿಶ್ರಿತ ಬಿಳಿ ಬಣ್ಣದವು;ಪುಷ್ಪ ಪಾತ್ರೆಯ ಕೊಳವೆ ಪ್ರಣಾಳದ ಆಕಾರದಲ್ಲಿದ್ದು ಅಂದಾಜು 1 ಸೆಂ.ಮೀ. ಉದ್ದವಿರುತ್ತದೆ.
ಕಾಯಿ / ಬೀಜ : ಬೆರ್ರಿ ಫಲಗಳು ಅಂದಾಜು 1.5 ಸೆಂ.ಮೀ. ಉದ್ದವಿದ್ದು ಬುಗುರಿಯ ಆಕಾರದಲ್ಲಿದ್ದು ಮುಕುಟದಲ್ಲಿ ಶಾಶ್ವತವಾದ ಪುಷ್ಪ ಪಾತ್ರೆಯನ್ನು ಹೊಂದಿರುತ್ತವೆ.

ಜೀವಪರಿಸ್ಥಿತಿ :

ಅಂದಾಜು 1600 ಮೀ. ಎತ್ತರದ ಪ್ರದೇಶಗಳಲ್ಲಿನ ನಿತ್ಯ ಹರಿದ್ವರ್ಣ ಕಾಡುಗಳ ಒಳಛಾವಣಿಯಲ್ಲಿ ಈ ಪ್ರಭೇದ ಕಂಡುಬರುತ್ತದೆ.

ವ್ಯಾಪನೆ :

ನೈರುತ್ಯ ಪಶ್ಚಿಮ ಘಟ್ಟಕ್ಕೆ ಸೀಮಿತವಾದ ಈ ಪ್ರಭೇದ ದಕ್ಷಿಣ ಸಹ್ಯಾದ್ರಿಯ ಅಗಸ್ತ್ಯಮಲೈ ಬೆಟ್ಟಗಳು ಮತ್ತು ವರುಶುನಾಡು ಪ್ರದೇಶಗಳಲ್ಲಿ ವ್ಯಾಪಿಸಿದೆ.

ಸ್ಥಿತಿ :

ಉಳಿವಿನ ಆತಂಕಕಾರಿ ಸ್ಥಿತಿ (IUCN 2000).

ಗ್ರಂಥ ಸೂಚಿ :

J. Bombay Nat. Hist. Soc. 84:408.1987;Sasidharan, Biodiversity documentation for Kerala- Flowering Plants, part 6:178.2004.

Top of the Page