English   Kannada   Tamil   
ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ
| ಪ್ರಕೃತಿ : | 5 ಮೀ. ಎತ್ತರದವರೆಗಿನ ಮರಗಳು. |
| ಕಾಂಡ ಮತ್ತು ತೊಗಟೆ : | ತೊಗಟೆ ಕಂದು ಬಣ್ಣದಲ್ಲಿದ್ದು,ನಯವಾಗಿರುತ್ತದೆ ಮತ್ತು ಹೆಚ್ಚು ಬೆಂಡಿನ ಅಂಶವುಳ್ಳ ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತವೆ;ಕಚ್ಚು ಮಾಡಿದ ಜಾಗ ಕೆಂಪು ಛಾಯೆ ಹೊಂದಿದ್ದು ಬಿಳಿ ಬಣ್ಣದ ಗೆರೆಗಳ ಸಮೇತವಿರುತ್ತದೆ. |
| ಕವಲುಗಳು ಮತ್ತು ಕಿರುಕೊಂಬೆಗಳು : | ಕಿರುಕೊಂಬೆಗಳು ದುಂಡಾಗಿದ್ದು,ಬೂದು ಬಣ್ಣದ ಮೃದುತುಪ್ಪಳದಿಂದ ಕೂಡಿರುತ್ತವೆ. |
| ಎಲೆಗಳು : | ಎಲೆಗಳು ಸರಳವಾಗಿದ್ದು ಪರ್ಯಾಯ ಮಾದರಿಯಲ್ಲಿ ಜೋಡಣೆಯಾಗಿದ್ದು, ಕಾಂಡದ ಎರಡೂ ಕಡೆ ಎದುರು ಬದರಿನ ಲಂಬ ಸಾಲಿನಲ್ಲಿರುತ್ತವೆ;ಕಾವಿನೆಲೆಗಳು ಪಾರ್ಶ್ವದಲ್ಲಿದ್ದು ಮೃದುತುಪ್ಪಳದಿಂದ ಕೂಡಿರುತ್ತವೆ,ಉದುರುವ ಮಾದರಿಯಲ್ಲಿದ್ದು ಉದುರಿ ಹೋದ ನಂತರ ಗುರುತುಗಳನ್ನು ಉಳಿಸುತ್ತವೆ;ತೊಟ್ಟುಗಳು 0.5-1(4.5) ಸೆಂ.ಮೀ.ವರೆಗಿನ ಉದ್ದವಿದ್ದು, ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತವೆ, ಮೃದುತುಪ್ಪಳದಿಂದ ಕೂಡಿರುತ್ತವೆ ;ಪತ್ರಗಳು 3.5 – 7.5 X 2.5 - 5 ಸೆಂ.ಮೀ. ಗಾತ್ರ, ಅಂಡಾಕಾರದಿಂದ ಭರ್ಜಿಯವರೆಗಿನ ಆಕಾರ ಹೊಂದಿದ್ದು, ಕ್ರಮೇಣ ಚೂಪಾಗುವವರೆಗಿನ ತುದಿ, ಅಸಮ್ಮಿತಿಯಾದ ಮತ್ತು ಉಪಹೃದಯಾಕಾರದ ಬುಡ,ಗರಗಸ ದಂತಿತ ಅಂಚು,ಒರಟಾದ ಮೇಲ್ಮೈ ಹೊಂದಿದ್ದು, ತಳ ಭಾಗದಲ್ಲಿ ಸೂಕ್ಷ್ಮವಾದ ಬಿಳಿ ಕೂದಲುಗಳಿಂದ ಕೂಡಿರುತ್ತದೆ ; ಪತ್ರಗಳ ಬುಡದಲ್ಲಿ 3-5 ನಾಳಗಳಿರುತ್ತವೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಕಾಲುವೆಗೆರೆ ಸಮೇತವಿರುತ್ತದೆ;ಎರಡನೇ ದರ್ಜೆಯ ನಾಳಗಳು ಅಂದಾಜು 4 ಜೋಡಿಗಳಿರುತ್ತವೆ; ಮೂರನೇ ದರ್ಜೆಯ ನಾಳಗಳು ಅಂತರ ಹೊಂದಿದ್ದು, ಜಾಲಬಂಧ ನಾಳ ವಿನ್ಯಾಸದವುಗಳಾಗಿದ್ದು ಎಲೆಯ ದಿಂಡಿಗೆ ಅಡ್ಡವಾಗಿ ಕೂಡುವ ಮಾದರಿಯಲ್ಲಿರುತ್ತವೆ. |
| ಪುಷ್ಪಮಂಜರಿ / ಹೂಗಳು : | ಹೂಗಳು ಏಕಲಿಂಗಿಗಳು,ಗಂಡು ಮತ್ತು ಹೆಣ್ಣು ಹೂಗಳು ಪ್ರತ್ಯೇಕ ಸಸ್ಯಗಳಲ್ಲಿರುತ್ತವೆ, ಅಕ್ಷಾಕಂಕುಳಿನಲ್ಲಿನ ಗುಚ್ಛಗಳಲ್ಲಿ ಅಥವಾ ಮಧ್ಯಾರಂಭಿ ಮಂಜರಿಯಲ್ಲಿರುತ್ತವೆ; ಹೂಗಳು ತೊಟ್ಟುರಹಿತವಾಗಿರುತ್ತವೆ. |
| ಕಾಯಿ / ಬೀಜ : | ಡ್ರೂಪ್ಗಳು ಗೋಳಾಕಾರದಲ್ಲಿದ್ದು,0.4 ಸೆಂ.ಮೀ. ಉದ್ದವಿರುತ್ತವೆ,ಕಳಿತಾಗ ಕಪ್ಪು ಬಣ್ಣ ಹೊಂದಿರುತ್ತವೆ; ಬೀಜಗಳ ಸಂಖ್ಯೆ 1. |