ಜಾಂಟೋಲಿಸ್ ಟೊಮೆಂಟೋಸ (Roxb.) Raf. - ಸಪೋಟೇಸಿ

ಪರ್ಯಾಯ ನಾಮ : ಸಿಡೆರೋಜೈಲಮ್ ಟೊಮೆಂಟೋಸಮ್ Roxb.

Vernacular names : Tamil: ಕರಿಮ್ಕರMalayalam: ಕಬ್ಬಿಣದ ಮರ,ಹೊಳೆದಾಚಲ,ಕಂಪಾಲೆ ಮರ

English   Kannada   Tamil   

ಸಸ್ಯದ ವೈಜ್ಞಾನಿಕ ವಿವರ ಜೀವಪರಿಸ್ಥಿತಿ ವ್ಯಾಪನೆ ಗ್ರಂಥ ಸೂಚಿ

ಸಸ್ಯದ ವೈಜ್ಞಾನಿಕ ವಿವರ :

ಪ್ರಕೃತಿ : 15 ಮೀ ಎತ್ತರದವರೆಗಿನ ಮರಗಳು.
ಕಾಂಡ ಮತ್ತು ತೊಗಟೆ : ಕಾಂಡ ಕೊರಕಲುಗಳ ಸಮೆತವಿರುತ್ತದೆ;ತೊಗಟೆ ಕೆಂಪು ಮಿಶ್ರಿತ ಕಂದು ಬಣ್ಣದಲ್ಲಿದ್ದು ಅನಿಯತವಾಗಿ ಚಕ್ಕೆಯೇಳುವ ಮಾದರಿಯಲ್ಲಿರುತ್ತದೆ;ಕಚ್ಚು ಮಾಡಿದ ಜಾಗ ನಸು ಕೆಂಪು.
ಕವಲುಗಳು ಮತ್ತು ಕಿರುಕೊಂಬೆಗಳು : ಕಾಂಡ ಮತ್ತು ಕವಲುಗಳು ದೊಡ್ಡ ಮುಳ್ಳುಗಳ ಸಮೇತವಿರುತ್ತವೆ;ಎಳೆಯ ಕಿರುಕೊಂಬೆಗಳು ದುಂಡಾಗಿದ್ದು, ವಾಯುವಿನಿಮಯ ಬೆಂಡು ರಂಧ್ರಗಳ ಸಮೇತವಿರುತ್ತವೆ, ಬೂದು ಬಣ್ಣದ ಮೃದು ತುಪ್ಪಳದಿಂದ ಕೂಡಿದ್ದು ನಂತರ ರೋಮರಹಿತವಾಗುತ್ತವೆ.
ಜಿನುಗು ದ್ರವ : ಸಸ್ಯ ಕ್ಷೀರ ಹಾಲಿನ ಬಿಳಿ ಬಣ್ಣ ಹೊಂದಿದ್ದು ವಿಫುಲವಾಗಿರುತ್ತದೆ.
ಎಲೆಗಳು : ಎಲೆಗಳು ಸರಳವಾಗಿದ್ದು ಪರ್ಯಾಯ ಮತ್ತು ಸುತ್ತು ಜೋಡನಾ ವ್ಯವಸ್ಥೆಯಲ್ಲಿರುತ್ತವೆ; ತೊಟ್ಟುಗಳು 0.4 -0.7 ಸೆಂ.ಮೀ. ಉದ್ದವಿದ್ದು, ಅಡ್ಡ ಸೀಳಿದಾಗ ಸಪಾಟ ಪೀನ ಮಧ್ಯದ ಆಕಾದಲ್ಲಿರುತ್ತವೆ,ಮೃದುತುಪ್ಪಳದಿಂದ ಕೂಡಿರುತ್ತವೆ; ಪತ್ರಗಳು 4 -10 X 2 – 5 ಸೆಂ.ಮೀ. ಗಾತ್ರ, ಸಂಕುಚಿತ ಬುಗುರಿಯಿಂದ ಅಂಡವೃತ್ತ-ಬುಗುರಿಯವರೆಗಿನ ಆಕಾರ ಹೊಂದಿದ್ದು, ಉಪ-ಚೂಪಾದ ಅಥವಾ ಚೂಪಲ್ಲದ ಮಾದರಿಯ ತುದಿ,ಬೆಣೆಯಾಕಾರದ ಅಥವಾ ಒಳಬಾಗಿದ ಮಾದರಿಯ ಬುಡ, ನಯವಾದ ಅಂಚು, ತೊಗಲನ್ನು ಹೋಲುವ ಮೇಲ್ಮೈ ಹೊಂದಿದ್ದು ಮಧ್ಯನಾಳವನ್ನು ಹೊರತು ಪಡಿಸಿ ಪಡಿಸಿ ಮಿಕ್ಕೆಲ್ಲಾ ಭಾಗಗಳು ರೋಮರಹಿತವಾಗಿರುತ್ತದೆ; ಮಧ್ಯನಾಳ ಪತ್ರದ ಮೇಲ್ಭಾಗದಲ್ಲಿ ಚಪ್ಪಟೆಯಾಗಿರುತ್ತದೆ; ಎರಡನೇ ದರ್ಜೆಯ ನಾಳಗಳು 10 - 12 ಜೋಡಿಗಳಿರುತ್ತವೆ;ಮೂರನೇ ದರ್ಜೆಯ ನಾಳಗಳ ಕವಲುಗಳು ಎಲೆಯ ಅಕ್ಷದ ಕಡೆಗಿರುತ್ತವೆ.
ಪುಷ್ಪಮಂಜರಿ / ಹೂಗಳು : ಹೂಗಳು ಅಕ್ಷಾಕಂಕುಳಿನಲ್ಲಿನ ಗುಚ್ಛಗಳಲ್ಲಿರುತ್ತವೆ ಮತ್ತು ಬಿಳಿ ಬಣ್ಣದಲ್ಲಿರುತ್ತವೆ; ತೊಟ್ಟುಗಳು ಅಂದಾಜು 0.7 ಸೆಂ.ಮೀ.ವರೆಗಿನ ಉದ್ದವಿರುತ್ತವೆ.
ಕಾಯಿ / ಬೀಜ : ಬೆರ್ರಿ ಅಂಡ - ಅಂಡವೃತ್ತದ ಆಕಾರದಲ್ಲಿದ್ದು ಅಂದಾಜು 2 ಸೆಂ.ಮೀ. ಉದ್ದವಿರುತ್ತದೆ; ಬೀಜದ ಸಂಖ್ಯೆ 1.

ಜೀವಪರಿಸ್ಥಿತಿ :

500 ಮತ್ತು 1600 ಮೀ. ನಡುವಿನ ಮಧ್ಯಮ ಎತ್ತರದ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳ ಉಪ-ಛಾವಣಿಯಲ್ಲಿ ಮತ್ತು ಅತಿಎತ್ತರದ ಪ್ರದೇಶಗಳ ನಿತ್ಯ ಹರಿದ್ವರ್ಣ ಕಾಡುಗಳ ಮೇಲ್ಛಾವಣಿಯಲ್ಲಿ ಈ ಪ್ರಭೇದ ಬೆಳೆಯುತ್ತದೆ.

ವ್ಯಾಪನೆ :

ಭಾರತ,ಶ್ರೀಲಂಕಾ ಮತ್ತು ಮ್ಯಾನ್ಮಾರ್; ಪಶ್ಚಿಮ ಘಟ್ಟದ ಎಲ್ಲಾ ಪ್ರದೇಶಗಳು.

ಗ್ರಂಥ ಸೂಚಿ :

Baill., Traite, Bot. Med. Phan. 1500. 1884; Gamble, Fl. Madras 2: 759. 1993 (re.ed.); Sasidharan, Biodiversity documentation for Kerala- Flowering Plants, part 6: 269. 2004; Saldanha, Fl. Karnataka 1: 333.1984; Cooke, Fl. Bombay 2: 90.1908; Almeida, Fl. Maharashtra 3:170. 2001

Top of the Page